News Karnataka Kannada
Tuesday, April 30 2024
ಮಂಗಳೂರು

ಪ್ರವಾಸಿಗರ ಗಮನಕ್ಕೆ: ಕುಮಾರಪರ್ವತ ಚಾರಣಕ್ಕೆ ಮತ್ತೆ ಅವಕಾಶ

Tourists notice: Kumaraparvata trekking allowed again
Photo Credit : News Kannada

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣ ಅ. 7ರ ಇಂದಿನಿಂದ ಆರಂಭಗೊಳ್ಳಲಿದೆ. ಇದೀಗ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಚಾರಣಕ್ಕೆ ಅವಕಾಶ ಒದಗಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾದ್ಯಮಕ್ಕೆ ತಿಳಿಸಿದ್ದಾರೆ.

ಈ ಹಿಂದೆ ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಭಾರೀ ಮಳೆಯ ಕಾರಣ ಚಾರಣಿಗರ ಹಿತದೃಷ್ಟಿಯಿಂದ ಕುಮಾರಪರ್ವತ ಚಾರಣವನ್ನು ಅ. 3ರಿಂದ ನಿಷೇಧಿಸಲಾಗಿತ್ತು. ಅದಕ್ಕಿಂತ ಮೊದಲು ಮೇ ತಿಂಗಳಿನಿಂದ ಸೆ.29ರ ತನಕ ಅರಣ್ಯ ಇಲಾಖೆಯು ಬಿರು ಬೇಸಗೆ ಮತ್ತು ಅಧಿಕ ಮಳೆಯ ಕಾರಣದಿಂದಾಗಿ ನಿರ್ಬಂಧ ವಿಧಿಸಿತ್ತು. ಆ ಬಳಿಕ ಸೆ. 30ರಿಂದ ನಿರ್ಬಂಧ ತೆರವುಗೊಳಿಸಿ ಚಾರಣಕ್ಕೆ ಅವಕಾಶ ನೀಡಿತ್ತು.

ಕುಮಾರಪರ್ವತ ಚಾರಣ ಮತ್ತೆ ಆರಂಭಗೊಳ್ಳಲಿರುವುದರಿಂದ ಪರ್ವತದ ದಾರಿಯಲ್ಲಿ ಮತ್ತು ಪರ್ವತದಲ್ಲಿ ಸ್ವಚ್ಛತೆ ಕಾಪಾಡಲು ವಿಶೇಷ ವ್ಯವಸ್ಥೆಯನ್ನು ಇಲಾಖೆ ಮಾಡಿದೆ, ಜತೆಗೆ ಸ್ವಚ್ಛತೆ ಕಾಪಾಡುವಂತೆ ಮನವಿ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು