Categories: ಮಂಗಳೂರು

ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ತುಳು: ಜೆ. ಆರ್.‌ ಲೋಬೊ ಭರವಸೆ

ಮಂಗಳೂರು: ನಾನು ಮತ ಕೇಳುವುದಕ್ಕೆ ಹೋದಲ್ಲೆಲ್ಲ ಜನರ ಕಾಂಗ್ರೆಸ್‌ ಕಡೆಗೆ ಆಕರ್ಷಿತರಾಗಿರುವುದು ದೃಢಪಟ್ಟಿದೆ. ಬಿಜೆಪಿ ಆಡಳಿತದ ವೈಫಲ್ಯ, ಭ್ರಷ್ಟಾಚಾರದಿಂದ ಜನರು ತತ್ತರಿಸಿ ಹೋಗಿದ್ದಾರೆ. ಹೋದಲ್ಲೆಲ್ಲ ಬದಲಾವಣೆ ಬೇಕು. ಕಾಂಗ್ರೆಸ್‌ಗೆ ಮತ ಹಾಕುತ್ತೇವೆ ಎಂದು ಜನರು ತಿಳಿಸುತ್ತಿದ್ದಾರೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರ ಅಭ್ಯರ್ಥಿ ಜೆ. ಆರ್‌. ಲೋಬೊ ಹೇಳಿದರು.

ನ್ಯೂಸ್‌ ಕನ್ನಡ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕುರಿತು ಮನದಾಳವನ್ನು ಹಂಚಿಕೊಂಡರು. 150 ಕ್ಕಿಂತ ಹೆಚ್ಚು ಸ್ಥಾನವನ್ನು ಕಾಂಗ್ರೆಸ್‌ ಗೆಲ್ಲಲಿದೆ ಎಂಬುದನ್ನು ಹಲವಾರು ಸಮೀಕ್ಷೆಗಳು ಹೇಳಿವೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ತುಳುವಿಗೆ ಅಧಿಕೃತ ಭಾಷೆ ಸ್ಥಾನ ಮಾನ ನೀಡುವ ಕೆಲಸ ಮಾಡಲಿದೆ. ಇತಿಹಾಸ ಗಮನಿಸಿದಲ್ಲಿ ತುಳು ಹಲವು ಭಾಷೆಗಳಿಗೆ ಮೂಲ ಎಂಬುದು ತಿಳಿದುಬರುತ್ತದೆ. ಕೊಡವ, ಮಲಯಾಳಂ ಭಾಷೆಯಲ್ಲಿಯೂ ಕೂಡ ತುಳುವಿನ ಹಲವು ಶಬ್ದಗಳಿವೆ. ಇದು ತುಳುವಿನ ಶ್ರೇಷ್ಠತೆ, ಇತಿಹಾಸವನ್ನು ಸಾರುತ್ತದೆ.

ಈ ನಿಟ್ಟಿನಲ್ಲಿ ತುಳುವಿನಂತಹ ಶ್ರೇಷ್ಠ ಭಾಷೆಗೆ ಸೂಕ್ತ ಸ್ಥಾನ ಮಾನ ನೀಡುವ ಕೆಲಸ ಮಾಡುತ್ತೇವೆ ಎಂದರು. ಅಂತೆಯೇ ಇಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದವರಿಗೆ ತುಳುನಾಡಿನಲ್ಲಿ ಸೂಕ್ತ ಉದ್ಯೋಗ ದೊರೆಯುತ್ತಿಲ್ಲ. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ, ಕ್ರೀಡಾ ಪ್ರವಾಸೋದ್ಯಮ, ಐಟಿ, ಸೇರಿದಂತೆ ಪ್ರತಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಭವಿಷ್ಯದ ಕಾಂಗ್ರೆಸ್‌ ಸರ್ಕಾರ ಒತ್ತು ನೀಡಲಿದೆ ಎಂದು ಹೇಳಿದರು.

Gayathri SG

Recent Posts

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

1 min ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

12 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

22 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

34 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

46 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

49 mins ago