Categories: ಮಂಗಳೂರು

ಪುತ್ತೂರಿನಲ್ಲಿ ಮೇಳೈಸಿದ ತುಳುವೆರೆ ಮೇಳೊ-2023

ಪುತ್ತೂರು: ತುಳುನಾಡಿನ ಆಚಾರ ವಿಚಾರಗಳನ್ನು ಪರಿಚಯಿಸುವ ತುಳು ಭಾಷೆಗೆ ತನ್ನದೇ ಆದ ಮಹತ್ವವನ್ನು ಹೊಂದಿದ್ದು, ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದಲ್ಲಿ ಸೇರಿಸುವ ಎಲ್ಲಾ ಪ್ರಯತ್ನಗಳು ಮುಂದಿನ ದಿನಗಳಲ್ಲಿ ನಡೆಯಲಿವೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಅವರು  ಇಲ್ಲಿಯ ಬಂಟರ ಭವನದಲ್ಲಿ ಪುತ್ತೂರು ತುಳುಕೂಟದ ಸುವರ್ಣ ಮಹೋತ್ಸವ ಹಾಗೂ ತಾಲೂಕು ತುಳುವೆರೆ ಮೇಳೊ-೨೦೨೩ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಕಳಸೆಗೆ ಭತ್ತ ತುಂಬುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಒಂದು ಭಾಷೆ ಸಮಾಜದ ಜನಾಂಗ, ಸಂಸ್ಕೃತಿಯನ್ನು ಬೆಸುಗೆ ಮಾಡುವ ಮಹತ್ವವನ್ನು ಪಡೆದಿದೆ. ಈ ಪೈಕಿ ತುಳುವಿನ ಕುರಿತು ಇರುವ ಐಡೆಂಟಿಟಿ ಇಂದು ಬದಲಾವಣೆ ಆಗುವ ಸಂಗತಿ ಆಗಿದೆ. ತುಳು ಭಾಷೆಯ ಕುರಿತು ಜಗತ್ತಿಗೆ ತಿಳಿಸಲು ಇಂತಹಾ ಕಾರ್ಯಕ್ರಮ ಸಹಕಾರಿಯಾಗಿದೆ. ಈ ಮೂಲಕ ಇತರ ಭಾಷೆಯೊಂದಿಗೆ ತುಳು ಭಾಷೆಯನ್ನು ಪರಿಚಯಿಸುವ, ಉಳಿಸುವ ಕಾರ್ಯ ನಡೆಯಬೇಕಾಗಿದೆ ಎಂದರು.

ಪ್ರದರ್ಶನ ಮಳಿಗೆಯನ್ನು ಉದ್ಘಾಟಿಸಿದ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಮಾತನಾಡಿ, ತುಳುನಾಡಿನ ಸೃಷ್ಟಿ ತುಳುಭಾಷೆ ನಮ್ಮ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಾಚರಿಸುತ್ತಿದೆ. ತುಳುನಾಡಿದ ಆಚರಣೆಗಳಾದ ನಾಗಾರಾಧನೆ, ಭೂತಾರಾಧನೆ, ಕಂಬಳ ಮುಂತಾದ ಕ್ರೀಡೆಗಳು ತುಳು ಸಂಸ್ಕೃತಿಯ ಒಂದು ಛಾಯೆಯಾಗಿ ಮೆಚ್ಚುಗೆಗೆ ಪಾತ್ರವಾಗಿದೆ ಎಂಧರು.

ಮುಖ್ಯ ಅತಿಥಿಯಾಗಿ ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ತುಳುಭಾಷೆ ದ.ಕ., ಉಡುಪಿಯಲ್ಲಿ ಭಾರೀ ಪ್ರಾಮುಖ್ಯತೆ ಪಡೆದಿದೆ. ಪುತ್ತೂರಿನಲ್ಲಿ ತುಳುಕೂಟದಂತಹ ಕಾರ್ಯಕ್ರಮದ ಮೂಲಕ ಸಂಘಟನೆ ಮಾಡಲಾಗಿದೆ. ತುಳು ಭಾಷೆಯಿಂದ ಎಲ್ಲರೂ ಸಮಾಜದಲ್ಲಿ ಸಹಬಾಳ್ವೆಯಿಂದ ಬದುಕಿ ಬಾಳುವಂತಾಗಲಿ ಎಂದರು.

ತುಳವೆರೆ ಮೇಳೊ ಸಮಿತಿ ಗೌರವಾಧ್ಯಕ್ಷ ಸವಣೂರು ಸೀತಾರಾಮ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಂದು ಭಾಷೆಗೆ ಅದರದ್ದೇ ಆದ ಸಂಸ್ಕೃತಿ, ಸಂಸ್ಕಾರ ಇದ್ದು, ತುಳು ಭಾಷೆ, ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಇಂತಹಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ತುಳು ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಪ್ರಯತ್ನಿಸೋಣ ಎಂದರು.

ಮುಖ್ಯ ಅತಿಥಿಗಳಾಗಿ ನಗರಸಭೆ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು, ಸಂಪ್ಯ ಅಕ್ಷಯ ಕಾಲೇಜು ನಿರ್ದೇಶಕ ಜಯಂತ ನಡುಬೈಲು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯೆ ಪ್ರೇಮಲತಾ ರಾವ್, ಡಾ.ಪ್ರದೀಪ್ ಕುಮಾರ್ ಪಾಲ್ಗೊಂಡು ಶುಭ ಹಾರೈಸಿದರು. ವೇದಿಕೆಯಲ್ಲಿ ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ತುಳುವೆರೆ ಮೇಳೊ ಸಮಿತಿ ಕೋಶಾಧಿಕಾರಿ ರವಿಪ್ರಸಾದ್ ಬಿ.ವಿ., ಉಪಾಧ್ಯಕ್ಷೆ ಹೀರಾ ಉದಯ್, ಸಹಕಾರ್ಯದರ್ಶಿ ಉಲ್ಲಾಸ್ ಪೈ, ಸಂತೋಷ್ ಶೆಟ್ಟಿ, ನಯನಾ ರೈ ಉಪಸ್ಥಿತರಿದ್ದರು. ಸಮಿತಿ ಕಾರ್ಯದರ್ಶಿ ಡಾ.ರಾಜೇಶ್ ಬೆಜ್ಜಂಗಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ತುಳುವೆರೆ ಮೇಳೊ ಸಮಿತಿ ಅಧ್ಯಕ್ಷ ಪ್ಯಾಟ್ರಿಕ್ ಸಿಪ್ರಿಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಳಿಕ ವಿವಿಧ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಚಾರಗೋಷ್ಠಿಗಳು ನಡೆದವು.

Ashika S

Recent Posts

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

21 seconds ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

24 mins ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

38 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

1 hour ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

2 hours ago