ಮಂಗಳೂರು

ಮಂಗಳೂರಿನಲ್ಲಿ ‘ಎಂಡಿಎಂಎ’ನ ಕುಖ್ಯಾತ ಡ್ರಗ್ ಪೆಡ್ಲರ್​ಗಳು ಸೆರೆ

ಮಂಗಳೂರು: ಮಾದಕ ವಸ್ತು ‘ಸಿಂಥೆಟಿಕ್ ಡ್ರಗ್ಸ್ ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್ ಕಾಟಿಪಳ್ಳ 2ನೇ ಬ್ಲಾಕ್‌ನ ಶಾಕೀಬ್ ಯಾನೆ ಶಬ್ಬು (33), ಚೊಕ್ಕಬೆಟ್ಟು 8ನೇ ಬ್ಲಾಕ್‌ನ ನಿಸಾರ್ ಹುಸೈನ್ ಯಾನೆ ನಿಚ್ಚು (34) ಬಂಧಿತ ಆರೋಪಿಗಳು. ಇವರಿಂದ ಒಟ್ಟು 52 ಗ್ರಾಂ ತೂಕದ 2,60,000 ರೂ.ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕಾರು, 2 ಮೊಬೈಲ್ ಫೋನು, ನಗದು 1,800 ರೂ., ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 7,83,300 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ.

ಸುರತ್ಕಲ್ ತಡಂಬೈಲ್ ಪರಿಸರದ ಬೀಚ್ ರಸ್ತೆಯಲ್ಲಿ ಕಾರಿನಲ್ಲಿ ಇಬ್ಬರು ಅಕ್ರಮವಾಗಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿದೆ. ಆರೋಪಿಗಳ ಪೈಕಿ ಶಾಕೀಬ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮೂರು ಕಳವು ಪ್ರಕರಣಗಳು, ಕೊಲೆ ಯತ್ನ ಪ್ರಕರಣ, ಹಲ್ಲೆ ಪ್ರಕರಣ, ಬಜ್ಪೆ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಬಂದರ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ, ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ, ಮೂಡುಬಿದಿರೆ ಠಾಣೆಯಲ್ಲಿ ಸರ ಕಳ್ಳತನ ಪ್ರಕರಣ, ಕಾರ್ಕಳ ನಗರ ಠಾಣೆ, ಕಾರ್ಕಳ ಗ್ರಾಮಾಂತರ ಠಾಣೆ, ಶಿರ್ವಾ ಠಾಣೆಗಳಲ್ಲಿ ಸರಕಳ್ಳತನ ಪ್ರಕರಣ, ಮಣಿಪಾಲದಲ್ಲಿ ದರೋಡೆ ಪ್ರಕರಣ ಹೀಗೆ ಒಟ್ಟು 13 ಪ್ರಕರಣಗಳು ದಾಖಲಾಗಿವೆ.

ನ್ಯಾಯಾಲಯದಿಂದ ಜಾಮೀನು ಮೇಲೆ ಬಿಡುಗಡೆಗೊಂಡ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹಾಗಾಗಿ ಈತನ ವಿರುದ್ಧ ನ್ಯಾಯಾಲಯವು ವಾರೆಂಟ್ ಹೊರಡಿಸಿತ್ತು. ನಿಸಾರ್ ಹುಸೈನ್ ನಿಚ್ಚು ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಕೊಲೆಯತ್ನ ಪ್ರಕರಣ, ಬರ್ಕೆ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ಹಾಗೂ ಕೊಲೆಯತ್ನ ಪ್ರಕರಣ, ಮುಲ್ಕಿ ಠಾಣೆಯಲ್ಲಿ ಕಳವು ಪ್ರಕರಣ, ಕದ್ರಿ ಠಾಣೆ, ಉಪ್ಪಿನಂಗಡಿ, ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳನ್ನು ಅಡ್ಡಗಟ್ಟಿ ದರೋಡೆ ನಡೆಸಿದ 3 ಪ್ರಕರಣಗಳು, ಪಾಂಡೇಶ್ವರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ಹೀಗೆ 9 ಪ್ರಕರಣಗಳು ದಾಖಲಾಗಿದೆ.

ಈ ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡ ಬಳಿಕ ಮತ್ತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ 7 ವಾರಂಟ್ ಜಾರಿಯಲ್ಲಿದೆ. ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಪಂದ್ಯಾಟದ ವೇಳೆಯಲ್ಲಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಕೂಡಾ ಈತ ಭಾಗಿಯಾಗಿದ್ದು, ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ತೆ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ., ಎಸ್ಸೈಗಳಾದ ರಾಜೇಂದ್ರ ಬಿ., ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago