ಬೆಳ್ತಂಗಡಿ: ಉಜಿರೆಯ ಸಿದ್ಧವನ ಬಸ್ ನಿಲ್ದಾಣ ಬಳಿ ದ್ವಿಚಕ್ರ ವಾಹನವೊಂದು ಕೆ.ಎಸ್.ಆರ್.ಟಿ.ಸಿ. ಬಸ್ಗೆ ಹಿಂಬದಿಯಿಂದ ಡಿಕ್ಕಿಹೊಡೆದಿದ್ದು ಸವಾರರಿಬ್ಬರು ಗಾಯಗೊಂಡ ಘಟನೆ ಶುಕ್ರವಾರ ಸಂಭವಿಸಿದೆ.
ಧರ್ಮಸ್ಥಳ ನಿವಾಸಿ ಯಶೋಧರ ಮತ್ತು ಪೆರಿಯಡ್ಕ ನಿವಾಸಿ ವಿನಿತ್ ಎಂಬವರು ದ್ವಿಚಕ್ರ ವಾಹನದಲ್ಲಿ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದು, ಮಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸಿಗೆ ಉಜಿರೆ ಸಿದ್ಧವನ ಬಸ್ ನಿಲ್ದಾಣದ ಬಳಿ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಅಪಘಾತದಿಂದ ದ್ವಿಚಕ್ರವಾಹನ ಜಖಂಗೊಂಡಿದ್ದು, ಸವಾರರಿಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.
ತಕ್ಷಣ ಕೆ.ಎಸ್.ಆರ್.ಟಿ.ಸಿ. ಬಸ್ ನಿರ್ವಾಹಕರು ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.