Categories: ಮಂಗಳೂರು

ಉಡುಪಿ: ಬಿಜೆಪಿಯ ಹಿಂದುತ್ವದ ಪ್ರಯೋಗ ಶಾಲೆಯಲ್ಲಿ ಕಮಲ ಕಲಿಗಳ ಜಯಭೇರಿ

ಮಂಗಳೂರು: ಮಂಗಳೂರು: ಬಿಜೆಪಿಯ ಹಿಂದುತ್ವದ ಪ್ರಯೋಗ ಶಾಲೆ ಉಡುಪಿಯಲ್ಲಿ ಬಿಜೆಪಿಯ ಬೇರು ಆಳದಲ್ಲಿದ್ದು, ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತ್ತಷ್ಟು ಬಲಗೊಂಡಿದೆ.

ಈ ಬಾರಿ ಬಿಜೆಪಿ ಹೈಕಮಾಂಡ್‌ ಹೊಸ ಪ್ರಯೋಗವೊಂದನ್ನು ರಾಜ್ಯದಲ್ಲಿ ಮಾಡಿತ್ತು. ಅನೇಕ ಹೊಸ ಮುಖಗಳಿಗೆ ಟಿಕೆಟ್‌ ಕೊಡುವ ಮೂಲಕ ಬಿಜೆಪಿ ಸಾಮಾನ್ಯ ಕಾರ್ಯಕರ್ತರ ಪಕ್ಷ ಎಂದು ಸಾಬೀತು ಮಾಡಲು ಮುಂದಾಗಿತ್ತು. ಆದರೆ ಈ ಪ್ರಯೋಗ ಕೆಲ ಕ್ಷೇತ್ರದಲ್ಲಿ ಕೈ ಕೊಟ್ಟರೂ, ಉಡುಪಿಯಲ್ಲಿ ಬಿಜೆಪಿ ಪ್ರಯೋಗ ಯಶಸ್ಸು ಕಂಡಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರ ಹೊರತು ಪಡಿಸಿ ಉಳಿದ ಕುಂದಾಪುರ, ಕಾಪು, ಬೈಂದೂರು, ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿತ್ತು. ಇದೀಗ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಐದು ವಿಧಾನಸಭಾ ಕ್ಷೇತ್ರ ಬಿಜೆಪಿ ತೆಕ್ಕೆಗೆ ಬಿದ್ದಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ, ಹಾಲಿ ಶಾಸಕ ಸುನೀಲ್ ಕುಮಾರ್ ಕಾಂಗ್ರೆಸ್‌ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ವಿರುದ್ಧ ಪ್ರಯಾಸದ ಗೆಲುವು ಸಾಧಿಸಿದ್ದಾರೆ.

ಉಡುಪಿ ಕ್ಷೇತ್ರದಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಯಶಪಾಲ್ ಸುವರ್ಣ ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಮೊದಲ ಪ್ರಯತ್ನದಲ್ಲೇ ಯಶಸ್ಸು ಕಂಡಿದ್ದು ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಿದ್ದಾರೆ. ಇನ್ನು ಮಾಜಿ ಸಚಿವ ಕಾಂಗ್ರೆಸ್‌ ಅಭ್ಯರ್ಥಿಗೆ ವಿನಯ್ ಕುಮಾರ್ ಸೊರಕೆ ಅವರಿಗೆ ಈ ಬಾರಿಯೂ ಸೋಲಾಗಿದೆ.
ವ್ಯಕ್ತಿ ವರ್ಚಸ್ಸಿನ ಮೇಲೆ ನಿಂತಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೂಡ ಬಿಜೆಪಿ ಗೆಲುವು ಸಾಧಿಸಿದ್ದು, ಹಾಲಾಡಿ ಶ್ರೀನಿವಾಸ ಶೆಟ್ಟಿ ಬೆಂಬಲಿತ ಬಿಜೆಪಿ ಅಭ್ಯರ್ಥಿ ಕಿರಣ್‌ ಕೊಡ್ಗಿ ಇಪ್ಪತ್ತು ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್‌ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರಿಗೆ ಸೋಲಾಗಿದೆ. ಬೈಂದೂರು ಕ್ಷೇತ್ರದಲ್ಲಿ ಈ ಬಾರಿ ಸಾಮಾನ್ಯ ಕಾರ್ಯಕರ್ತನಿಗೆ ಬಿಜೆಪಿ ಟಿಕೆಟ್‌ ನೀಡಿತ್ತು. ಹಾಲಿ ಶಾಸಕ ಸುಕುಮಾರ್ ಶೆಟ್ಟಿ ಬದಲಿಗೆ ಉತ್ತಮ ಜನ ಬೆಂಬಲ ಹೊಂದಿದ್ದ ಗುರುರಾಜ ಗಂಟಿಹೊಳಿ ಅವರಿಗೆ ಟಿಕೆಟ್‌ ನೀಡಿತ್ತು. ಸದ್ಯ ಬೈಂದೂರು ಕ್ಷೇತ್ರ ಬಿಜೆಪಿ ಪಾಲಾಗಿದ್ದು, ಗುರುರಾಜ ಗಂಟಿಹೊಳಿ ಮಾಜಿ ಶಾಸಕ ಕಾಂಗ್ರೆಸ್‌ ಅಭ್ಯರ್ಥಿ ಗೋಪಾಲ ಪೂಜಾರಿಯವರಿಗೆ ಮತ್ತೊಮ್ಮೆ ಸೋಲು ಅನುಭವಿಸುವಂತೆ ಮಾಡಿದ್ದಾರೆ.

Umesha HS

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

3 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

4 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

4 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

4 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

6 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

6 hours ago