News Karnataka Kannada
Sunday, April 14 2024
Cricket
ಮಂಗಳೂರು

ಉಡುಪಿ: ಯಕ್ಷರಂಗದ ಸವ್ಯಸಾಚಿ, ಯಕ್ಷಸುಮ ತೋನ್ಸೆ ಜಯಂತ್ ಕುಮಾರ್ ನಿಧನ

Udupi: Yakshranga's Sabyasachi, Yakshsuma Thonse Jayanth Kumar passes away
Photo Credit : News Kannada

ಉಡುಪಿ: ಖ್ಯಾತ ಯಕ್ಷಗಾನ ಭಾಗವತರಾಗಿ, ಉಡುಪಿ ಯಕ್ಷಶಿಕ್ಷಣ ಟಸ್ಟ್ ನಲ್ಲಿ ಗುರುಗಳಾಗಿ ಸಾವಿರಾರು ಕಲಾವಿದರನ್ನು ಸಿದ್ಧಪಡಿಸಿದ ತೋನ್ಸೆ ಜಯಂತ ಕುಮಾರ್ ಇಂದು ನಿಧನರಾದರು.

ಅವರಿಗೆ 77ವರ್ಷ ವಯಸ್ಸಾಗಿತ್ತು. ಹಂಗಾರಕಟ್ಟೆ ಚೇತನಾ ಪ್ರೌಢ ಶಾಲೆಯ ಕಛೇರಿ ಅಧೀಕ್ಷಕರಾಗಿ ನಿವೃತ್ತರಾಗಿದ್ದ ತೋನ್ಸೆಯವರಿಗೆ ಯಕ್ಷಗಾನ ಪ್ರವೃತ್ತಿಯಾಗಿತ್ತು. ಸಂಚಾರಿ ಯಕ್ಷಗಾನ ಭಂಡಾರವೆಂದೇ ಖ್ಯಾತರಾಗಿದ್ದ ತೋನ್ಸೆ ಕಾಂತಪ್ಪ ಮಾಸ್ತರರ ಸುಪುತ್ರರಾಗಿದ್ದ ಇವರಿಗೆ ತಂದೆಯೇ ಯಕ್ಷಗಾನ ಗುರು ಆಗಿದ್ದರು. ಆರಂಭದಲ್ಲಿ ಯಕ್ಷಗಾನ ವೇಷಧಾರಿಯಾಗಿ ಆಮೇಲೆ ಯಕ್ಷಗಾನ ಗುರುಗಳಾಗಿ ಈ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರು. ಉಡುಪಿ ಶಾಸಕರ ನೇತೃತ್ವದ ಯಕ್ಷ ಶಿಕ್ಷಣ ಟಸ್ಟ್ ನಲ್ಲಿ ಆರಂಭದಿಂದಲೂ ಗುರುಗಳಾಗಿ ಅದರ ಯಶಸ್ಸಿಗೆ ಕಾರಣರಾಗಿದ್ದರು. ಅವರು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಶ್ರೀರಾಮ ವಿಠಲ ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ ಸೇರಿದಂತೆ ನೂರಾರು ಪ್ರಶಸ್ತಿಗೆ ಭಾಜನರಾಗಿದ್ದರು.

ಅವರು ಪತ್ನಿ ಮೂವರು ಪುತ್ರರನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು