Categories: ಮಂಗಳೂರು

ಉಜಿರೆ: ‘ಭಿನ್ನಯೋಚನೆ ಸೃಜನಶೀಲತೆಗೆ ಆಧಾರ’- ಬಿ.ಕೆ ಸುಮತಿ

ಉಜಿರೆ: ವಿಭಿನ್ನವಾಗಿ ಆಲೋಚಿಸುವ ಸಾಮರ್ಥ್ಯ ಮತ್ತುಕೌಶಲ್ಯಪೂರ್ಣಅಭಿವ್ಯಕ್ತಿಯ ಮಾದರಿಗಳೊಂದಿಗೆ ಗುರುತಿಸಿಕೊಂಡಾಗ ಮಾತ್ರ ಮಾಧ್ಯಮ ರಂಗ ನಿರೀಕ್ಷಿಸುವ ಸೃಜನಶೀಲತೆಯನ್ನು ರೂಪಿಸಿಕೊಳ್ಳಲು ಸಾಧ್ಯಎಂದು ಬೆಂಗಳೂರು ಆಕಾಶವಾಣಿಯ ಹಿರಿಯ ಉದ್ಘೋಷಕಿ, ಕಂಟೆಂಟ್ ಬರಹಗಾರ್ತಿ ಬಿ.ಕೆ ಸುಮತಿ ಅಭಿಪ್ರಾಯ ಪಟ್ಟರು.

ಉಜಿರೆಯ ಶ್ರೀ.ಧ.ಮಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ರೇಡಿಯೋ ಬರಹ ಮತ್ತು ನಿರೂಪಣಾ ಕ್ರಮಗಳ ಕುರಿತು ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಧ್ಯಮಗಳಲ್ಲಿದ್ದಾಗ ಉದ್ದೇಶಿತ ಸಮೂಹದ ಬಗ್ಗೆ ಸಂಪೂರ್ಣವಾಗಿ ಅರಿತಿರಬೇಕು. ಸಮೂಹದ ಆದ್ಯತೆಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಬೆಳವಣಿಗೆಯ ಮಾದರಿಗಳನ್ನು ಕಟ್ಟಿಕೊಡುವುದರ ಕಡೆಗೆ ಗಮನವಿರಬೇಕು. ವಿಶಿಷ್ಠವಾಗಿ ಅಭಿವ್ಯಕ್ತಿಸುವ ಕೌಶಲ್ಯದ ಮೂಲಕ ಮಾಧ್ಯಮ ವೃತ್ತಿಪರತೆಯ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸೃಜನಶೀಲತೆಯನ್ನು ನಿರಂತರ ಶ್ರದ್ಧೆಯ ಮೂಲಕ ಕಂಡುಕೊಳ್ಳಬಹುದು. ಹೊಸದಾಗಿ ಯೋಚಿಸುತ್ತ ಹೋದಾಗ ಮಾತ್ರ ಸೃಜನಶೀಲತೆ ಸಾಧ್ಯವಾಗುತ್ತದೆ. ಆಯಾ ಮಾದ್ಯಮಗಳ ತಾಂತ್ರಿಕ ವ್ಯಾಕರಣಕ್ಕೆಅನುಗುಣವಾಗಿ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಹಾಗಾದಾಗ ಮಾತ್ರ ಮಾಧ್ಯಮ ವೃತ್ತಿಪರತೆಯ ಸೃಜನಶೀಲತೆಯು ವಿಸ್ತಾರಗೊಳ್ಳುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಡಾ. ಹಂಪೇಶ್ ಮಾತನಾಡಿದರು. ಮಾಧ್ಯಮಗಳಲ್ಲಿ ಅನಿರೀಕ್ಷಿತವಾಗಿ ಬರುವಂತಹ ಸವಾಲುಗಳನ್ನು ಎದುರಿಸಲು ಸಿದ್ಧರಾಗುವ ಮನಸ್ಥಿತಿಯೊಂದಿಗೆ ವಿದ್ಯಾರ್ಥಿಗಳು ಪೂರ್ವತಯಾರಿ ನಡೆಸಬೇಕು ಎಂದರು.
ಕಾರ್ಯಕ್ರಮವನ್ನು ವಿಜಯ್ ಹಿರೇಮಠ್ ಸ್ವಾಗತಿಸಿ, ರಕ್ಷಿತಾ ವಂದಿಸಿ, ಶಿವಕುಮಾರ್ ನಿರೂಪಿಸಿದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

4 hours ago