ಉಜಿರೆ: ಕಲ್ಮಂಜ ಗ್ರಾಮದ ಗುತ್ತು ಮನೆ ಬಾಲಚಂದ್ರ ರಾವ್ ಎಂಬವರ ಮನೆಯ ದಾಸ್ತಾನು ಕೊಠಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ಉಂಟಾದ ಘಟನೆ ಸೋಮವಾರ ನಡೆದಿದೆ.
ರಬ್ಬರ್ ಸ್ಮೋಕ್ ಹೌಸ್ ಕಡೆಯಿಂದ ದಾಸ್ತಾನು ಕೊಠಡಿಗೆ ಬೆಂಕಿ ಆವರಿಸಿದ್ದು 7,000 ಕ್ಕಿಂತ ಅಧಿಕ ತೆಂಗಿನ ಕಾಯಿ 2 ಕ್ವಿಂಟಲ್ ಗಿಂತ ಹೆಚ್ಚಿನ ರಬ್ಬರ್ ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ತೀವ್ರತೆಗೆ ಕೊಟ್ಟಿಗೆಯ ಚಾವಣಿ, ಗೋಡೆಗೂ ಹೆಚ್ಚಿನ ಹಾನಿ ಉಂಟಾಗಿದೆ. ಸುಮಾರು 3 ಲಕ್ಷ ರೂ. ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.
ದಾಸ್ತಾನು ಕೊಠಡಿಯ ಸಮೀಪವೇ ಜಾನುವಾರುಗಳ ಹಟ್ಟಿ ಇದ್ದು ಅಲ್ಲಿಗೂ ಬೆಂಕಿ ಪಸರಿಸುವ ಸಾಧ್ಯತೆ ಇತ್ತು. ಸ್ಥಳೀಯರ ಹಾಗೂ ಬೆಳ್ತಂಗಡಿ ಅಗ್ನಿಶಾಮಕ ದಳದ ತುರ್ತು ಸ್ಪಂದನೆಯಿಂದ ಬೆಂಕಿಯನ್ನು ಹತೋಟಿಗೆ ತರಲಾದ ಕಾರಣ ಜಾನುವಾರು ಹಟ್ಟಿಗೆ ಹೆಚ್ಚಿನ ಹಾನಿ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.
ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…
ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…
ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…
ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…
ಪಾಕಿಸ್ತಾನದ ಬಳಿ ಪರಮಾಣು ಬಾಂಬ್ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್ ನಾಯಕ ಮಣಿಶಂಕರ್ ಐಯ್ಯರ್ ಹೇಳಿಕೆಗೆ…