ಮಂಗಳೂರು

ಉಜಿರೆ: ನದಿಯಲ್ಲಿ ವಿಸರ್ಜಿಸಿದ್ದ ಮೂರ್ತಿ ಮರಳಿ ದೇವಸ್ಥಾನಕ್ಕೆ

ಉಜಿರೆ: ಕಳೆದ ವರ್ಷ ನದಿಯಲ್ಲಿ ವಿಸರ್ಜಿಸಲಾಗಿದ್ದ ದೇವರ ಮೂರ್ತಿಯನ್ನು ದೈವಜ್ಞರ ಆಜ್ಞೆಯಂತೆ ಮತ್ತೆ ಹುಡುಕಿ ದೇವಸ್ಥಾನಕ್ಕೆ ತರಲಾಗಿದೆ.

ಉಜಿರೆ ಗ್ರಾಮದ ಪೆರ್ಲದಲ್ಲಿ ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಪೊಜಿಸಿದ್ದ ಶ್ರೀ ಲಕ್ಷ್ಮಿ ಜನಾರ್ದನ ದೇವರ ಮೂರ್ತಿಯನ್ನು ಕಳೆದ ಡಿಸೆಂಬರ್ ನಲ್ಲಿ ನಿಡಿಗಲ್ ನೇತ್ರಾವತಿ ನದಿಯಲ್ಲಿ ವಿಸರ್ಜಿಸಿ ಬಾಲಾಲಯದಲ್ಲಿ ಬೇರೊಂದು ಮೂರ್ತಿಯನ್ನು ಸ್ಥಾಪಿಸಲಾಗಿತ್ತು.

ಪೆರ್ಲದಲ್ಲಿ ಕಳೆದ ಡಿ.8 ಮತ್ತು 9 ಹಾಗೂ 15 ಮತ್ತು 16ರಂದು ದೈವಜ್ಞರಾದ ನೆಲ್ಯಾಡಿಯ ಶ್ರೀಧರ ಗೋರೆಯವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆದಿದೆ.ಈ ವೇಳೆ ಅವರು ತಿಳಿಸಿದಂತೆ ಮೊದಲು ಪೂಜಿಸಿದ ಮೂರ್ತಿಯನ್ನೇ ಪ್ರತಿಷ್ಠಾಪನೆ ಮಾಡಬೇಕು ಎಂದು ತಿಳಿಸಿ ಡಿ.18ರಂದು ಹುಡುಕಿದರೆ
ವಿಸರ್ಜನೆ ಮಾಡಿದ ಪರಿಸರದಲ್ಲಿ ಮೂರ್ತಿ ಸಿಗುತ್ತದೆ ಎಂದು ಹೇಳಿದ್ದರು. ಆ ಪ್ರಕಾರ ಹುಡುಕಿದಾಗ ಅದೇ ಮೂರ್ತಿ ನಿಡಿಗಲ್ ಕಿಂಡಿ ಅಣೆಕಟ್ಟಿನ ಸಮೀಪ ಪತ್ತೆಯಾಗಿದೆ. ಇದೇ ದೇವಸ್ಥಾನಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಅವರು ತಿಳಿಸಿದ ದೇವಸ್ಥಾನದ ಪರಿಸರ ಜಾಗದಲ್ಲಿ ಅಗೆದಾಗ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಕೂಡ ಪತ್ತೆಯಾಗಿದೆ.

ನಿಡಿಗಲ್ ನದಿಯಲ್ಲಿ ಸಿಕ್ಕಿರುವ ಮೂರ್ತಿಯನ್ನು ದೇಗುಲಕ್ಕೆ ಕೊಂಡೊಯ್ಯಲಾಗಿದೆ. ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಕೆಲಸ ಕಾರ್ಯಗಳು ನಡೆಯುತ್ತಿದ್ದು ಉಜಿರೆ ಗ್ರಾ.ಪಂ ಉಪಾಧ್ಯಕ್ಷ ರವಿಕುಮಾರ್ ಇವರ ಅಧ್ಯಕ್ಷತೆಯಲ್ಲಿ ಮೊಕ್ತೇಸರ ಹಾಗೂ ಕಾರ್ಯದರ್ಶಿ ಕೃಷ್ಣ ಒಪ್ಪಂತ್ತಾಯರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ.

ಅಷ್ಟಮಂಗಲ ಪ್ರಶ್ನೆ ಸಂದರ್ಭದಲ್ಲಿ ಶ್ರೀಧರ ಗೋರೆ ಅವರ ಜತೆ ಮಂಗಳೂರು ಮಂಗಳಾದೇವಿ ದೇವಸ್ಥಾನದ ಅರ್ಚಕ ಗಣೇಶ್ ಐತಾಳ, ಶ್ರೀನಿಧಿ ಮುಚ್ಚಿನ್ನಾಯ ಕಾರಿಂಜ,ಅರ್ಚಕ ಅನಂತ ಇರ್ವತ್ರಾಯ ಸಹಕರಿಸಿದರು.

ಅಷ್ಟಮಂಗಲದ ಬಳಿಕ ಪ್ರಶ್ನಾಚಿಂತನೆಯಲ್ಲಿ ಬಂದಂತೆಯೇ ಮುಂದಿನ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ನಡೆಯಲಿದೆ. ಈ ಸಂದರ್ಭದಲ್ಲಿಯೇ ಅದೇ ಲಕ್ಷ್ಮಿ ಜನಾರ್ದನ ಮೂರ್ತಿ ಮತ್ತು ಶಿವಲಿಂಗ ಪತ್ತೆಯಾಗಿರುವುದರಿಂದ ಕ್ಷೇತ್ರದ ಸಾನಿಧ್ಯಕ್ಕೆ ಹೆಚ್ಚಿನ ಶಕ್ತಿ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Ashika S

Recent Posts

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

13 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

23 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

36 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

11 hours ago