Categories: ಮಂಗಳೂರು

ಉಜಿರೆ: ಸಾಹಿತ್ಯಾಸಕ್ತರಿಗೆ ಪ್ರೋತ್ಸಾಹ ನೀಡುತ್ತಿರುವ ಸಾಹಿತ್ಯ ಸಮ್ಮೇಳನದ ಸಂದೇಶ ಎಲ್ಲೆಡೆ ಹರಡಲಿ

ಉಜಿರೆ: “ಕನ್ನಡವು ಶ್ರೇಷ್ಠ ಭಾಷೆಯಾಗಿದ್ದು, ಇದನ್ನು ಉಳಿಸಿ,ಬೆಳೆಸಿ, ಪಸರಿಸಿ,ಇದರ ಕಂಪನ್ನುಇನ್ನಷ್ಟು ಎತ್ತರಕ್ಕೆ ಏರಿಸಲು ಸಮ್ಮೇಳನವು ಸಹಕಾರಿಯಾಗಲಿ. ಪ್ರತಿ ವ್ಯಕ್ತಿಗೂ ಕನ್ನಡದ ಪರಿಚಯವನ್ನು, ಸಾಹಿತ್ಯಾಸಕ್ತರಿಗೆ ಪ್ರೋತ್ಸಾಹವನ್ನು ನೀಡುತ್ತಿರುವ ಸಾಹಿತ್ಯ ಸಮ್ಮೇಳನದ ಸಂದೇಶ ಎಲ್ಲೆಡೆ ಹರಡಲಿ” ಎಂದು ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದರು.

ಅವರು ಶುಕ್ರವಾರ ಉಜಿರೆಯಲ್ಲಿ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದಿಂದ ನಡೆಯುತ್ತಿರುವ ಈ ಕಾರ್ಯಕ್ರಮ ಯಶಸ್ವಿಯಾಗಿ ಜರಗಲಿದ್ದು,ಉತ್ತಮ ಆಶಯವನ್ನು ಹೊಂದಿದೆ. ಜಿಲ್ಲಾಡಳಿತದಿಂದ ಸಮ್ಮೇಳನಕ್ಕೆ ಬೇಕಾಗುವ ಅಗತ್ಯ ಸಹಕಾರ ನೀಡಲಾಗುವುದು” ಎಂದು ಹೇಳಿದರು.

ಉಜಿರೆ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ ಸಮ್ಮೇಳನದ ಧ್ವಜಾರೋಹಣ, ಕಸಾಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು.ಸಂಯೋಜನಾ ಸಮಿತಿ ಅಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ,ಜಿಲ್ಲಾ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರಾಜೇಶ್ವರಿ ಎಂ. ಹಾಗೂ ಸದಸ್ಯರು ತಾಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ,ವಿವಿಧ ಸಮಿತಿಗಳ ಸಂಚಾಲಕರಾದ ಡಾ.ಬಿ.ಎ.ಕುಮಾರ ಹೆಗ್ಡೆ,ಡಾ.ಭಾಸ್ಕರ್ ಹೆಗಡೆ, ಡಾ. ದಿವಾಕೊಕ್ಕಡ, ಗಂಗಾರಾಣಿ ಜೋಶಿ, ಯತೀಶ್ ಕುಮಾರ್, ಡಾ.ಬಿ.ರಾಜೇಶ್,ಡಾ. ಪ್ರಸನ್ನ ಕುಮಾರ್ ಐತಾಳ್,ಗೋಪಾಲಕೃಷ್ಣ ಕಾಂಚೋಡು,ಹರ್ಷ ಕುಮಾರ್ ಕೆ., ರಾಮಚಂದ್ರ ಶೆಟ್ಟಿ,ಜಗನ್ನಾಥ ಶೆಟ್ಟಿ,ತಂಗಚ್ಚನ್ ಮತ್ತಿತರರು ಉಪಸ್ಥಿತರಿದ್ದರು.

ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಲ್ಲಾಲು ಸ್ವಾಗತಿಸಿದರು. ಬಂಗಾಡಿ ಹಿಪ್ರಾ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು.

Ashika S

Recent Posts

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

1 hour ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

1 hour ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

1 hour ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

1 hour ago

ಮೊಬೈಲ್ ವಿಚಾರಕ್ಕೆ ಹಲ್ಲೆ: ಆರೋಪಿಗಳು ವಶಕ್ಕೆ

ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಬಾಪೂಜಿನಗರದ ಮಧುರ ಬಾರ್ ಬಳಿ ನಡೆದಿದೆ.

2 hours ago

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

2 hours ago