News Karnataka Kannada
Tuesday, May 07 2024
ಮಂಗಳೂರು

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ‌ ಏಕನಾಥ ಶಿಂಧೆ ಭೇಟಿ

Maharashtra CHIEF Minister Eknath Shinde visits Sri Kshetra Dharmasthala
Photo Credit : News Kannada

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ‌ ಏಕನಾಥ ಶಿಂಧೆ ಅವರು ಸೋಮವಾರ ಬೆಳಿಗ್ಗೆ ಭೇಟಿ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅವರು ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು.

ಬೆಳ್ತಂಗಡಿ ಕ್ಷೇತ್ರದ ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜ ಅವರು ಸ್ವಾಗತಿಸಿದರು. ಧರ್ಮಸ್ಥಳ ಕ್ಷೇತ್ರದ ಪರವಾಗಿ ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಡಾ. ಹೆಗ್ಗಡೆಯವರು ಕ್ಷೇತ್ರದ ಪರವಾಗಿ ಏಕನಾಥ ಶಿಂಧೆ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಕ್ಷೇತ್ರದಿಂದ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ ,ಕಚೇರಿ ಪ್ರಬಂಧಕ ಪಾರ್ಶ್ವನಾಥ ಜೈನ್, ದೀಕ್ಷಿತ್, ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್, ಮಹಾವೀರ ಅಜ್ರಿ, ಬಿಜೆಪಿ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಮಂಡಲ ಕಾರ್ಯದರ್ಶಿ ಶ್ರೀನಿವಾಸ ರಾವ್, ಸುರೇಶ್ ಶೆಟ್ಟಿ ಮುಂಗೇಲು ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು