ಉಳ್ಳಾಲ: ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯದಲ್ಲಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಕ್ಲೀನರ್ ಪ್ಯಾಂಟ್ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಆರೋಪ ಪ್ರಕರಣ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ.
ಬಸ್ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ಧ ಮಹಮ್ಮದ್ ಇಮ್ರಾನ್(26) ಎಂಬಾತ ಪ್ಯಾಂಟ್ನ ಜಿಪ್ ತೆಗೆದು ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಈ ರೀತಿ ಯಾರಿಗಾದ್ರೂ ಈ ಮೊದಲೇ ಮಾಡಿದ್ರೆ ಇಲಾಖೆಗೆ ದೂರು ನೀಡುವಂತೆ ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮನವಿ ಮಾಡಿದ್ದಾರೆ.