News Karnataka Kannada
Saturday, April 27 2024
ಮಂಗಳೂರು

ಉಳ್ಳಾಲ: ಡಿವೈಡರ್ ಗುದ್ದಿದ ಬೈಕ್, ಸವಾರ ಗಂಭೀರ ಗಾಯ

Bike hits divider, rider seriously injured
Photo Credit : News Kannada

ಉಳ್ಳಾಲ: ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಶನಿವಾರ ತಡರಾತ್ರಿ ವೇಳೆ ಸಂಭವಿಸಿದೆ.

ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣ್ ರೈ (20) ಗಾಯಾಳು. ಕಲ್ಲಾಪು ಬುರ್ದುಗೋಳಿ ಕೋಲದಲ್ಲಿ ಭಾಗವಹಿಸಿದ್ದ ಇವರು ಬೈಕಿನಲ್ಲಿ ಕುತ್ತಾರಿನತ್ತ ಬರುವ ಸಂದರ್ಭ ಬೈಕ್ ಡಿವೈಡರಿಗೆ ಬಡಿದಿದ್ದು, ಪರಿಣಾಮ ಭೂಷಣ್ ಇನ್ನೊಂದು ರಸ್ತೆಗೆ ಎಸೆಯಲ್ಪಟ್ಟಿದ್ದರು. ತಲೆಗೆ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಕೆಲಕಾಲ ಬಿದ್ದಿದ್ದ ಅವರನ್ನು ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಕೇರಳದ ಆಲ್ಟೋ ಕಾರಿನಲ್ಲಿದ್ದ ಐವರ ತಂಡ ತಕ್ಷಣ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ತಲೆಗೆ ಗಾಯವಾಗಿರುವ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು