News Karnataka Kannada
Wednesday, May 01 2024
ಮಂಗಳೂರು

ಉಳ್ಳಾಲ: ರಾಸಾಯನಿಕ ಹೊತ್ತ ಟ್ಯಾಂಕರ್ ಪಲ್ಟಿ, ಆತಂಕ ಸೃಷ್ಟಿಸಿದ ಅನಿಲ ಸೋರಿಕೆ

Chemical-loaded tanker overturns, gas leakage
Photo Credit : News Kannada

ಉಳ್ಳಾಲ: ಕೇರಳದ ಕೊಚ್ಚಿಯಿಂದ ಬೈಕಂಪಾಡಿಯ ಪೈಂಟ್ ತಯಾರಿಕಾ  ಕಂಪನಿಗೆ ರಾಸಾಯನಿಕ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ತಡರಾತ್ರಿ ವೇಳೆ ಸಂಭವಿಸಿದೆ.

ಹೆದ್ದಾರಿ ಮದ್ಯೆಯೇ ಪಲ್ಟಿಯಾಗಿ ಬಿದ್ದು ಚಾಲಕ ಮಯೂರ್ (40) ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅವರನ್ನು ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಡರಾತ್ರಿ 1ರ ವರೆಗೆ ನಡೆದ ತೆರವು ಕಾರ್ಯಾಚರಣೆ !
ಲಾರಿ ಹಾಗೂ ಗ್ಯಾಸ್ ಹೊಂದಿದ್ದ ಟ್ಯಾಂಕರ್ ತೆರವು ತಡರಾತ್ರಿ 1 ಗಂಟೆಯವರೆಗೆ ನಡೆಯಿತು. ಅಗ್ನಿ ಶಾಮಕ ದಳ, ಎಸಿಪಿ ಧನ್ಯಾ ಎನ್. ನಾಯಕ್, ದಕ್ಷಿಣ ಸಂಚಾರಿ ಠಾಣೆಯ ರಮೇಶ್ ಹಾನಾಪುರ್, ಉಳ್ಳಾಲ ಠಾಣಾಧಿಕಾರಿ ಸಂದೀಪ್ ಜಿ.ಯಸ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಯಿತು. ನಡು ರಸ್ತೆಯಲ್ಲೇ ಉರುಳಿದ್ದ ರಾಸಾಯನಿಕ ಟ್ಯಾಂಕರಿನಿಂದ ಸಣ್ಣ ಪ್ರಮಾಣದಲ್ಲಿ ಸೋರಿಕೆ ಉಂಟಾಗಿ ಪರಿಸರವಿಡೀ ದುರ್ವಾಸನೆ ಬೀರುತಿತ್ತು. ಸ್ಥಳಕ್ಕಾಗಮಿಸಿದ ಬೈಕಂಪಾಡಿ ಬಿಎಎಸ್ ಎಫ್ ಸುರಕ್ಷಾ ತಂಡ ಸಮೀಪದ ವಾಣಿಜ್ಯ ಮಳಿಗೆಗಳ ವಿದ್ಯುತ್ ದೀಪಗಳನ್ನು ಆರಿಸಲು ಸೂಚನೆ ನೀಡಿತು. ರಾ.ಹೆ.66 ರ ಎರಡೂ ಕಡೆಗಳಲ್ಲಿ ವಾಹನಗಳು ಸಂಚರಿಸದಂತೆ ಸಂಚಾರಿ ಠಾಣಾ ಪೊಲೀಸರು ತಡೆಹಿಡಿದಿದ್ದರು.

ಬಿಎಎಸ್ ಎಫ್ ನಿಂದ ಬಂದ ಬೃಹತ್ ಗಾತ್ರದ ಕ್ರೇನ್ ಸಹಿತ ಎರಡು ಸಣ್ಣ ಕ್ರೇನ್ ಗಳನ್ನು ಬಳಸಿಕೊಂಡು 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ , ಮೊದಲಿಗೆ ಲಾರಿಯನ್ನು ಮೇಲಕ್ಕೆತ್ತಿ, ಆನಂತರ ಟ್ಯಾಂಕರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿ, ಇನ್ನೊಂದು ಲಾರಿಗೆ ಲೋಡ್ ಮಾಡಿ ತಕ್ಷಣ ಕಳುಹಿಸಲಾಯಿತು.

ರಾಸಾಯನಿಕ ಹೊಂದಿರುವ ಟ್ಯಾಂಕ್ ಹಲವು ಪದರಗಳು ಹಾಗೂ ಸುತ್ತಲೂ ಕಬ್ಬಿಣದ ಸುರಕ್ಷಾ ಕವಚ ಇರುವುದರಿಂದ ಸಣ್ಣ ಪ್ರಮಾಣದಲ್ಲಿ ಸೋರಿಕೆ ಉಂಟಾಗಿದೆ. ಸಾಬೂನಿಗೆ ಹಾಕುವ ರಾಸಾಯನಿಕ ಆಗುವುದರಿಂದ ಅಷ್ಟೊಂದು ಪರಿಣಾಮಕಾರಿಯಾಗಿರುವುದಿಲ್ಲ ಎಂದು ಬಿಎಎಸ್ ಎಫ್ ಸೇಫ್ಟಿ ಆಫೀಸರ್ ತಿಳಿಸಿದ್ದಾರೆ. ಯಶಸ್ವಿ ತೆರವು ಕಾರ್ಯಾಚರಣೆ ನಂತರ ಸ್ಥಳೀಯರು ನಿಟ್ಟುಸಿರು ಬಿಡುವಂತಾಯಿತು. ಉಳ್ಳಾಲ ಶಾಸಕ ಯು.ಟಿ ಖಾದರ್ ಅವರು ಬೆಂಗಳೂರು ಭೇಟಿಯಲ್ಲಿದ್ದರೂ ಆಪ್ತಸಹಾಯಕ ಪ್ರವೀಣ್ ಅವರನ್ನು ಸ್ಥಳಕ್ಕೆ ಕಳುಹಿಸಿ ತೆರವು ಕಾರ್ಯಾಚರಣೆ ಕುರಿತು ಕ್ಷಣ ಕ್ಷಣದ ಮಾಹಿತಿಯನ್ನು ಪಡೆದುಕೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು