Categories: ಮಂಗಳೂರು

ಉಳ್ಳಾಲ: ನೇತ್ರಾವತಿ ನದಿಗೆ ಬಿದ್ದು ಬೈತಾರ್ ನಿವಾಸಿ ಸಾವು

ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (೪೬) ಎಂಬವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಅದಕ್ಕಾಗಿ ಪ್ರಕಾಶ್ ಅವರು ಸ್ನೇಹಿತರು ಹಾಗೂ ಸಂಬಂಧಿಕರನ್ನು ಮನೆಗೆ ಕರೆದಿದ್ದರು. ಸುಮಾರು ೨೦ ರಷ್ಟು ನೆಂಟರು ಸ್ನೇಹಿತರನ್ನು ಕರೆದುಕೊಂಡು ಪ್ರಕಾಶ್ ಅವರು ತಮ್ಮ ತೋಟದ ಬಳಿಯಿರುವ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಅಲ್ಲಿ ನದಿ ನೀರಿಗೆ ಅಡಿಕೆ ಮರವನ್ನು (ಬಂಬು) ಅಡ್ಡವಾಗಿ ಹಾಕಿದ್ದರು. ಅದರಲ್ಲಿ ನಡೆದುಕೊಂಡು ಹೋಗುವ ಸಂದರ್ಭ ಆಕಸ್ಮಿಕ ಕಾಲುಜಾರಿ ಬಿದ್ದು , ನದಿ ನೀರಿನ ಹೂಳಿನಲ್ಲಿ ಹೂತುಹೋಗಿದ್ದರು. ಈಜಲು ಪರಿಣತರಾಗಿದ್ದರೂ ಮೇಲೆ ಬರಲು ಸಾಧ್ಯವಾಗದೇ, ನದಿ ನೀರಿನಲ್ಲಿ ಮುಳುಗಿದ್ದಾರೆ.

ಸ್ಥಳೀಯ ಈಜುಗಾರರು ಅವರನ್ನು ಮೇಲಕ್ಕೆತ್ತಲು ಪ್ರಯತ್ನಿಸಿದಾಗ ಸಾಧ್ಯವಾಗದೇ ಇದ್ದಾಗ, ಉತ್ತರಪ್ರದೇಶ ಮೂಲದ ಮರಳು ತೆಗೆಯುವ ಕಾರ್ಮಿಕರು ಶೋಧ ನಡೆಸಿ ಮೇಲಕ್ಕೆ ಎತ್ತಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಪ್ರಕಾಶ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಮೃತರು ಬೈಕಂಪಾಡಿಯ ಎಂ.ಸಿ.ಎಫ್‌ನಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಉದ್ಯೋಗದ ಜೊತೆಗೆ ಕೃಷಿ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು ಪ್ರಗತಿ ಪರ ಕೃಷಿಕರೂ ಆಗಿದ್ದರು. ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ashika S

Recent Posts

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

3 mins ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

8 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

8 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

9 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

9 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

9 hours ago