Categories: ಮಂಗಳೂರು

ಉಳ್ಳಾಲ: ಪಂಜರ ಕೃಷಿ ಮೀನು ಮಾರಣಹೋಮ: ನೀರು ಕಲ್ಮಷಗೊಂಡ ಶಂಕೆ

ಉಳ್ಳಾಲ: ನೇತ್ರಾವತಿ ನದಿಯಲ್ಲಿ ಪಂಜರ ಕೃಷಿ ಪದ್ಧತಿ ಮೂಲಕ ಸಾಕುತ್ತಿದ್ದ ಮೀನುಗಳ ಮಾರಣಹೋಮ ನಡೆದಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಕಾರ್ಖಾನೆಗಳಿಂದ ಬಿಡುವ ವಿಷಯುಕ್ತ ತ್ಯಾಜ್ಯ ನದಿನೀರಿನಲ್ಲಿ ಮಲಿನಗೊಂಡ ಹಿನ್ನೆಲೆಯಲ್ಲಿ ಘಟನೆ ಸಂಭವಿಸಿರುವ ಶಂಕೆಯನ್ನು ಮಾಲೀಕರು ವ್ಯಕ್ತಪಡಿಸಿದ್ದಾರೆ.

ಉಳ್ಳಾಲದ ಬ್ಲೇರಾ ಡಿಸೋಜ ಎಂಬವರಿಗೆ ಸೇರಿದ ಸಾಕು ಮೀನುಗಳು ಸಾವನ್ನಪ್ಪಿವೆ. ರೂ.3.5 ಲಕ್ಷ ಬೆಲೆಬಾಳುವ ಮೀನುಗಳು ಸಾವನ್ನಪ್ಪಿ ನಷ್ಟ ಸಂಭವಿಸಿದೆ. ಮುದ್ರ ಬ್ಯಾಂಕ್ ಸಾಲ ಮಾಡಿ ಬ್ಲೇರಾ ಅವರು ಮೀನಿನ ಕೃಷಿ ಆರಂಭಿಸಿದ್ದರು. ಎರಡು ವರ್ಷಗಳ ಹಿಂದೆ ವೃತ್ತಿಯನ್ನು ಆರಂಭಿಸಿದ ಬ್ಲೇರಾ ಅವರಿಗೆ ಇದೀಗ ಎರಡನೇ ಬಾರಿಯ ಮೀನಿನ ಕೃಷಿ ಸಂಪೂರ್ಣ ನಷ್ಟವನ್ನು ಉಂಟು ಮಾಡಿದೆ.

2022 ರ ನವೆಂಬರ್ ತಿಂಗಳಲ್ಲಿ ಈ ಬಾರಿಯ ಪಂಜರ ಕೃಷಿಯ ಮರಿಗಳನ್ನು ಹಾಕಲಾಗಿತ್ತು. ಪ್ಯಾಂಪೆನೋ ತಳಿಯ 4,500 ಮರಿಗಳು ಬೃಹತ್ ಗಾತ್ರದಲ್ಲಿ ಬೆಳೆದಿತ್ತು. ಒಂದೂವರೆ ವರ್ಷದಿಂದ ಮೀನು ಯಾವುದೇ ತೊಂದರೆಯಿಲ್ಲದೆ ಇತ್ತು. ಫೆ.11 ರಂದು ಬೆಳಿಗ್ಗೆ ಬ್ಲೇರಾ ಅವರು ನದಿಬದಿಗೆ ತೆರಳಿದಾಗ 22 ಮೀನುಗಳು ಸಾವನ್ನಪ್ಪಿದ್ದವು. ಆನಂತರ ಇಂದು ಪಂಜರದಲ್ಲಿದ್ದಂತಹ ಎಲ್ಲಾ ಮೀನುಗಳು ಸಾವನ್ನಪ್ಪಿ ನದಿ ನೀರಿನಲ್ಲಿ ತೇಲುತ್ತಿತ್ತು. ಜೊತೆಗೆ ಪಚಿಲೆ ಕೂಡಾ ಬಾಯ್ತೆರೆದಿದೆ. ನದಿ ನೀರು ಮಲಿನದಿಂದ ಘಟನೆ ಸಂಭವಿಸಿರುವ ಶಂಕೆ ಇದೆ.

ಕಾರ್ಖಾನೆಯಿಂದ ಹೊರಬಿಡುವ ರಾಸಾಯನಿಕ ಮಿಶ್ರಿತ ತ್ಯಾಜ್ಯ ನೀರಿನಿಂದ ಘಟನೆ ಸಂಭವಿಸಿರುವ ಶಂಕೆ ಇದ್ದು, ಎಕ್ಕೂರು ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾನಿಲಯದ ವಿಜ್ಞಾನಿ ಹಾಗೂ ಮೀನುಗಾರಿಕಾ ಇಲಾಖೆಯವರು ಭೇಟಿ ನೀಡಿ ನೀರಿನ ಸ್ಯಾಂಪಲ್ ಅನ್ನು ಪರೀಕ್ಷೆಗೆ ಕೊಂಡೊಯ್ದಿದ್ದಾರೆ.

Ashika S

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

6 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

33 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

50 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

1 hour ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago