Categories: ಮಂಗಳೂರು

ಉಳ್ಳಾಲ ನೈತಿಕ ಪೊಲೀಸ್‌ಗಿರಿ ಪ್ರಕರಣ; ಬಂಧಿತರ ಸಂಖ್ಯೆ ಐದಕ್ಕೇರಿಕೆ

ಉಳ್ಳಾಲ: ಮಂಗಳೂರಿನ ಸೋಮೇಶ್ವರ ಬೀಚ್‌ನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿ ತಲಪಾಡಿ ನಿವಾಸಿ ಅಖಿಲ್ ಎಂಬಾತನನ್ನು ಬಂಧಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್ , ತಲಪಾಡಿ ನಿವಾಸಿ ಮೋಕ್ಷಿತ್, ಸುಹಾನ್ ವಶಕ್ಕೆ ಪಡೆಯಲಾಗಿದ್ದು, ಬಂಧಿತರ ಸಂಖ್ಯೆ ಐದಕ್ಕೇರಿದೆ. ಬಂಧಿತರು ಹಿಂದೂ ಸಂಘಟನೆಗೆ ಸೇರಿದವರಂದು ತಿಳಿದುಬಂದಿದೆ. ಬಂಧಿತರಲ್ಲಿ ಓರ್ವ ಅಪ್ರಾಪ್ತನಾಗಿದ್ದು, ಐಪಿಸಿ 307 ಹಾಗೂ ಗಲಭೆ ಸೃಷ್ಟಿ ಆರೋಪದಡಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬುಧವಾರ ಸಾಯಂಕಾಲ ಸೋಮೇಶ್ವರ ಬೀಚ್‌ನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಮೂವರು ಹಿಂದು ವಿದ್ಯಾರ್ಥಿನಿಯರು ಬೀಚ್‌ನಲ್ಲಿ ಸುತ್ತಾಡುತ್ತಿದ್ದರು. ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಯುವಕರ ತಂಡ ಮುಸ್ಲಿಂ ಯುವಕರ ಮೇಲೆ ಹಲ್ಲೆ ನಡೆಸಿತ್ತು ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿಗಳ ದೂರಿ‌ನಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಮೂರು ತಂಡದಿಂದ ತನಿಖೆ
ಉಳ್ಳಾಲ ಪೊಲೀಸ್ ಠಾಣೆಗೆ ಮಂಗಳೂರು ಕಮಿಷನರ್‌ ಕುಲದೀಪ್ ಜೈನ್ ಭೇಟಿ ನೀಡಿ ಘಟನೆ ಬಗ್ಗೆ ಸಿಸಿಬಿ ಎಸಿಪಿ ಪಿ.ಎ ಹೆಗ್ಡೆ ಹಾಗೂ ಉಳ್ಳಾಲ ಇನ್‌ಸ್ಪೆಕ್ಟರ್ ಅವರಿಂದ ಮಾಹಿತಿ ಪಡೆದಿದ್ದಾರೆ. ಪ್ರಕರಣ ಗಂಭೀರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಠಾಣೆಯಲ್ಲೇ ಕಮಿಷನರ್ ಮೊಕ್ಕಾಂ ಹೂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಉಳಿದ ಆರೋಪಿಗಳ ಶೀಘ್ರ ಪತ್ತೆಗೆ ಕಮಿಷನರ್ ಕುಲದೀಪ್ ಮೂರು ಪೊಲೀಸ್ ತಂಡಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಅಮಾಯಕರ ಬಂಧನ
ಅಮಾಯಕ ಯುವಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಹಿಂದೂ ಸಂಘಟನೆಯ ಪ್ರಮುಖರು ಠಾಣೆಗೆ ಭೇಟಿ ನೀಡಿದ್ದಾರೆ. ಬಿಜೆಪಿ ನಾಯಕ ಸತೀಶ್ ಕುಂಪಲ ಹಾಗೂ ವಿಎಚ್ ಪಿ, ಬಜರಂಗದಳ ಪ್ರಮುಖರು ಠಾಣೆಗೆ ಭೇಟಿ ನೀಡಿ ಕಮಿಷನರ್ ಕುಲದೀಪ್ ಜೈನ್ ಅವರನ್ನು ಭೇಟಿಯಾಗಿ ಅಮಾಯಕರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿದರು. ಪ್ರಕರಣದ ಆರೋಪಿಗಳನ್ನಷ್ಟೇ ಬಂಧಿಸಲಾಗುವುದು. ವಶಕ್ಕೆ ಪಡೆದವರು ಕೇಸ್‌ನಲ್ಲಿ ಇಲ್ಲದಿದ್ದರೆ ಬಿಡುಗಡೆ ಮಾಡಲಾಗುವುದು ಎಂದು ಕಮಿಷನರ್‌ ತಿಳಿಸಿದ್ದಾರೆ ಎಂದು ಕಮಿಷನರ್ ಭೇಟಿ ಬಳಿಕ ಬಿಜೆಪಿ ಮುಖಂಡ ಸತೀಶ್ ಕುಂಪಲ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದ ಬೆನ್ನಲ್ಲೇ ಉಳ್ಳಾಲದಲ್ಲಿ ಅಹಿತಕರ ಘಟನೆ ನಡೆದಿದೆ. ಕಾಲೇಜಿನ ಅನ್ಯಕೋಮಿನ ವಿದ್ಯಾರ್ಥಿಗಳು ಸೋಮೇಶ್ವರ ಬೀಚ್‌ಗೆ ಬಂದಿದ್ದಾರೆ. ಪವಿತ್ರ ಕ್ಷೇತ್ರದಲ್ಲಿ ಅಶ್ಲೀಲವಾಗಿ ವರ್ತಿಸಿದಾಗ ಸ್ಥಳೀಯ ಯುವಕರು ಪ್ರಶ್ನೆ ಮಾಡಿದ್ದಾರೆ.
ಇದು ತಪ್ಪಾದರೂ ದೇವರ ಕ್ಷೇತ್ರದ ಬಳಿ ಅಶ್ಲೀಲ ವರ್ತನೆ ಕಂಡು ಸಹಜವಾಗಿ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳಲಿ. ಇಂಥ ಘಟನೆಗಳಿಗೆ ಯಾರೂ ಆಸ್ಪದ ನೀಡಬಾರದು. ಅಮಾಯಕರ ಬಂಧನ ಸರಿಯಲ್ಲ. ಯುವಕರು ನಮ್ಮ ಕಾರ್ಯಕರ್ತರಾ ಅಥವಾ ಅಲ್ಲವಾ ಅನ್ನೋದು ಪ್ರಶ್ನೆ ಅಲ್ಲ ಅವರ ಕುಟುಂಬದವರು ಬಂದು ಹೇಳಿದಾಗ ನಾವು ಠಾಣೆಗೆ ಬಂದಿದ್ದೇವೆ ಎಂದು ಮುಖಂಡರು ತಿಳಿಸಿದ್ದಾರೆ.

Sneha Gowda

Recent Posts

ಐಪಿಎಲ್​ನಿಂದ ಹೊರ ನಡೆದ ಸ್ಟಾರ್ ಆಟಗಾರ !

ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮೇಲೆ ಎಲ್ಲರ ಕಣ್ಣಿದೆ. ಆದರೆ, ಸಿಎಸ್​ಕೆ ಆಡಿರುವ 11 ಪಂದ್ಯಗಳಲ್ಲಿ…

16 mins ago

ಪೆನ್ ಡ್ರೈವ್ ಪ್ರಕರಣದ ಬೆನ್ನಲ್ಲೇ ಡಿಕೆಶಿ ಪೋಸ್ಟರ್ ವಾರ್

ಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆಶಿ ವಿರುದ್ಧ ಆರೋಪ ಕೇಳಿಬಂದ ಬೆನ್ನಲ್ಲೇ ನಗರದ ಕೆಲವು ಕಡೆಗಳಲ್ಲಿ ಅವರ ವಿರುದ್ಧ ಪೋಸ್ಟರ್ ಅಭಿಯಾನ…

18 mins ago

ಬಸ್‌ ಕಂಡಕ್ಟರ್‌ಗಳಿಗೆ ಲೋಹದ ವಿಸಿಲ್‌ ಉಡುಗೊರೆ ನೀಡಿದ ಚೆನ್ನೈ ಸೂಪರ್​ ಕಿಂಗ್ಸ್

ಚೆನ್ನೈ ಸೂಪರ್​ ಕಿಂಗ್ಸ್​ ಫ್ರಾಂಚೈಸಿಯು ಮೆಟ್ರೋಪಾಲಿಟನ್‌ ಟ್ರಾನ್ಸ್‌ಪೋರ್ಟ್ ಕಾರ್ಪೋರೇಶನ್‌ ಲಿಮಿಟೆಡ್‌ ಬಸ್‌ ಕಂಡಕ್ಟರ್‌ಗಳಿಗೆ 8 ಸಾವಿರ ಲೋಹದ ವಿಸಿಲ್‌ಗ‌ಳನ್ನು ಕಂಡಕ್ಟರ್‌ಗಳಿಗೆ…

19 mins ago

ನಿದ್ದೆ ಇಲ್ಲದೆ ಬಳಲುತ್ತಿದ್ದ ಖ್ಯಾತ ಸೌತ್ ನಟಿ ನಿಧನ!

ಖ್ಯಾತ ಸಿನಿಮಾ ನಟಿ ಕನಕಲತಾ ಇಂದು ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಅವರು ಬಹಳ ದಿನಗಳಿಂದ ನಿದ್ದೆ ಮಾಡಲಾಗದ…

36 mins ago

ಮತದಾನದ ಹಕ್ಕು ಚಲಾಯಿಸಿದ ಹಿಂದೂ ಹುಲಿ ಬಸನಗೌಡ ಪಾಟೀಲ್ ಯತ್ನಾಳ್

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎರಡನೇ ಹಂತದ ಮತದಾನದ ಭಾಗವಾಗಿ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನಿಂದ ವೋಟಿಂಗ್ ನಡೆಯುತ್ತಿದೆ.

46 mins ago

ಭ್ರಷ್ಟಾಚಾರ ಮುಕ್ತ, ಜಾತಿ ಮುಕ್ತ ವ್ಯವಸ್ಥೆಗಾಗಿ ಮತ ನೀಡಿ ಎಂದ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ನ ಗಾಂಧಿನಗರ ಲೋಕಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

54 mins ago