News Karnataka Kannada
Sunday, May 05 2024
ಮಂಗಳೂರು

ಉಳ್ಳಾಲ: ಬೈಕ್ ನಲ್ಲಿ ಗಾಂಜಾ ಸಾಗಾಟ ಓರ್ವನ ಬಂಧನ, ಇನ್ನೋರ್ವ ಪರಾರಿ

One arrested for transporting ganja on bike, another absconding
Photo Credit : News Kannada

ಉಳ್ಳಾಲ: ಬೈಕಿನಲ್ಲಿ ಗೋಣಿಚೀಲದಲ್ಲಿ ರೂ.40,000 ಮೌಲ್ಯದ ಗಾಂಜಾ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿರುವ ಘಟನೆ ತಲಪಾಡಿ ತಚ್ಚಣಿ ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಮಂಜೇಶ್ವರ ಸುಂಕದಕಟ್ಟೆಯ ಮೊಹಮ್ಮದ್ ರಾಝಿಕ್ ಎಂಬಾತನನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಅಸ್ಗರ್ ತಲೆಮರೆಸಿಕೊಂಡಿದ್ದಾನೆ. ಇಬ್ಬರು ತಲಪಾಡಿ ಗ್ರಾಮದ ತಚ್ಚಣಿ ಎಂಬಲ್ಲಿ ಗಾಂಜಾ ಮಾರಾಟ ಮಾಡಲು ಬಂದಿದ್ದರು. ಯಮಹಾ ಆರ್15 ಬೈಕಿನಲ್ಲಿ ಗೋಣಿಚೀಲದಲ್ಲಿ 4 ಕೆ.ಜಿ ತೂಕದ ರೂ.40,000 ಮೌಲ್ಯದ ಗಾಂಜಾ ಸಾಗಾಟ ನಡೆಸುತ್ತಿರುವ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಬೈಕ್ ಅಡ್ಡಗಟ್ಟುವ ವೇಳೆ ಓರ್ವ ಆರೋಪಿ ಪರಾರಿಯಾಗಿದ್ದಾನೆ. ಬಂಧಿತನಿಂದ ಗಾಂಜಾ ಹಾಗೂ ರೂ.1 ಲಕ್ಷ ಸೇರಿದಂತೆ ಒಟ್ಟು 1,40,000 ಬೆಲೆಬಾಳುವ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳ ವಿರುದ್ದ ಈ ಹಿಂದೆ ಮಂಜೇಶ್ವರ ,ಕಾಸರಗೋಡು, ಕುಂಬ್ಳೆ ಠಾಣಾ ವ್ಯಾಪ್ತಿಯಲ್ಲಿ ಕೊಲೆಯತ್ನ , ಗಾಂಜಾ ಮಾರಾಟ ಪ್ರಕರಣಗಳಿವೆ.

ಉಳ್ಳಾಲ ಠಾಣೆಯ ಇನ್ಸ್ಪೆಕ್ಟರ್ ಸಂದೀಪ್ ರವರ ಮಾರ್ಗದರ್ಶನದಲ್ಲಿ ಪಿಎಸ್ ಐ ಗಳಾದ ರೆವಣಸಿದ್ದಪ್ಪ, ಪ್ರದೀಪ್ ಟಿ,ಆರ್, ಶಿವಕುಮಾರ್ ಹಾಗು ಸಿಬ್ಬಂದಿಗಳಾದ ರಂಜಿತ್, ಅಶೋಕ,ಅಕ್ಬರ್, ಸಾಗರ, ವಾಸುದೇವ,ಸತೀಶ್, ಚಿದಾನಂದ,ಕಾರ್ಯಚರಣೆಯಲ್ಲಿ ಭಾಗವಹಿಸಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು