Categories: ಮಂಗಳೂರು

ಉಳ್ಳಾಲ: ಕೊಲ್ಯದಲ್ಲಿ ಕಾರು ಅಪಘಾತ, ಓರ್ವ ಸಾವು

ಉಳ್ಳಾಲ: ರಾ.ಹೆ. 66 ರಲ್ಲಿ ಇಂದು ರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರು ಯುವತಿಯರು ಸಣ್ಣ ಗಾಯಗಳೊಂದಿಗೆ ಪಾರಾಗಿರುವ ಘಟನೆ ಕೊಲ್ಯ- ಅಡ್ಕ ಬಳಿ ಸಂಭವಿಸಿದೆ.

ಉಪ್ಪಳ ಹಿದಾಯತ್ ನಗರ ನಿವಾಸಿ ಬಷಾರ ಅಹಮ್ಮದ್ (22) ಮೃತರು. ಇನ್ನೋರ್ವ ಗಾಯಾಳು ಗುರುತು ಪತ್ತೆಯಾಗಿಲ್ಲ. ಕೇರಳ ಕಣ್ಣೂರು ನಿವಾಸಿ ಫಾತಿಮ ಹಾಗೂ ರೇವತಿ ಎಂಬವರಿಗೆ ಗಾಯಗಳಾಗಿವೆ. ನಾಲ್ವರಿದ್ದ ಕಾರು ಕೊಲ್ಯ- ಅಡ್ಕ ಬಳಿ ರಸ್ತೆ ವಿಭಜಕವನ್ನು ಏರಿ, ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಈ ಸಂದರ್ಭ ಕಾರು ಚಲಾಯಿಸುತ್ತಿದ್ದ ಬಷಾರ ಅಹಮ್ಮದ್ ಅದರೊಳಕ್ಕೆ ಸಿಲುಕಿ, ತಲೆ ಸೇರಿದಂತೆ ದೇಹಕ್ಕೆ ಸಂಪೂರ್ಣ ಗಾಯಗೊಂಡು ಒಳಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ‌ .

ಇನ್ನುಳಿದ ಮೂವರನ್ನು ಸ್ಥಳೀಯರು ಸೇರಿ ಕಾರಿನಿಂದ ಹಲವು ನಿಮಿಷಗಳ ಕಾಲ ಕಾರ್ಯಾಚರಣೆ ನಡೆಸಿ ಹೊರತೆಗೆದಿದ್ದಾರೆ. ಈ ಪೈಕಿ ಓರ್ವ ಯುವತಿಯನ್ನು ಕಾರಿನಲ್ಲಿ ಪ್ರಶಾಂತ್ ಗಟ್ಟಿ ಎಂಬವರು ಎ.ಜೆ ಆಸ್ಪತ್ರೆಗೆ ಕೊಂಡೊಯ್ದು ಮಾನವೀಯತೆ ಮೆರೆದರೆ, ಇನ್ನೋರ್ವಳನ್ನು ಟಿ.ಟಿ ಮೂಲಕ ಅದೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಾಳುವನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗಾಯಾಳು ಪೈಕಿ ಫಾತಿಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿ ನಿಯಾಗಿದ್ದಾರೆ. ನಾಲ್ವರು ಗೆಳೆಯರಾಗಿದ್ದರೆಂದು ತಿಳಿದುಬಂದಿದೆ.

ಸ್ಥಳೀಯರಿಂದ ಪೊಲೀಸರ ತರಾಟೆ!

ಅಪಘಾತ ನಡೆದ ಸ್ಥಳಕ್ಕೆ ಸಂಚಾರಿ ಹಾಗೂ ಉಳ್ಳಾಲ ಠಾಣಾ ಪೊಲೀಸರು ತಡವಾಗಿ ಆಗಮಿಸಿದ್ದರು ಎಂದು ಆರೋಪಿಸಿ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡರು. ಅಲ್ಲದೆ ಬ್ಯಾರಿಕೇಡ್ ಅಳವಡಿಸುವ ಕುರಿತು ಹಲವು ಸಮಯದಿಂದ ಹೇಳುತ್ತಾ ಬಂದಿದ್ದರೂ, ಸ್ಲಂ ಧನೆ ಸಿಕ್ಕಿಲ್ಲ ಎಂದು ಆರೋಪಿಸಿದರು. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ashika S

Recent Posts

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

31 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

45 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

1 hour ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

2 hours ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

2 hours ago