Categories: ಮಂಗಳೂರು

ಉಳ್ಳಾಲ: ಭೀಕರ ಕಾರು ಅಪಘಾತ ಇನ್ನೋರ್ವ ಗಾಯಾಳು ಮೃತ್ಯು

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯ -ಅಡ್ಕ ನಡುವೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೂ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಪಡೀಲ್ ಫಸ್ಟ್ ನ್ಯುರೋ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಪಘಾತ ನಡೆದ ಸ್ಥಳದಲ್ಲಿಯೇ ಕಾರು ಚಲಾಯಿಸುತ್ತಿದ್ದ ಸಹೋದರ ಅಬ್ದುಲ್ ರಿಫಾಯಿ ನಿನ್ನೆಯೇ ಮೃತಪಟ್ಟಿದ್ದರು.
ಉಪ್ಪಳ ಹಿದಾಯತ್ ನಗರದ ಬಾಷರ್ ಅಹಮ್ಮದ್ (22) ಮೃತಪಟ್ಟವರು. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವಿದ್ಯಾರ್ಥಿಯಾಗಿದ್ದರು.

ಜ.28 ರಂದು ಗಲ್ಫ್ ನಿಂದ ಆಗಮಿಸಿದ್ದ ಮಹಮ್ಮದ್ ರಿಫಾಯಿ ತಂದೆಯ ಸಹೋದರನ ಪುತ್ರ ಬಾಷರ್ ಅಹಮ್ಮದ್ ಸೇರಿದಂತೆ ಆತನ ಸಹಪಾಠಿಗಳಾದ ಫಾತಿಮ ಹಾಗೂ ರೇವತಿ ಮಂಗಳೂರಿನಿಂದ ತಲಪಾಡಿ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಕೊಲ್ಯ ಸಮೀಪ ಕಾರು ಚಆಲಕನ ನಿಯಂತ್ರಣ ಕಳೆದು ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಪೂರ್ಣ ನುಜ್ಜುಗುಜ್ಜಾಗಿತ್ತು.

ಮೃತ ಅಬ್ದುಲ್ ರಿಫಾಯಿ ಕಟ್ಟಡ ಗುತ್ತಿಗೆದಾರ ಸಯ್ಯದ್ ಎಂಬವರ ಪುತ್ರನಾಗಿದ್ದರು. ಮೃತರು ತಾಯಿ, ಇಬ್ಬರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ.

ಮೃತ ಬಾಷರ್ ಅಹಮ್ಮದ್ ಸಹೋದರ ರಿಫಾಯಿ ವಿದೇಶದಿಂದ ಬಂದ ಹಿನ್ನೆಲೆಯಲ್ಲಿ ಸಹಪಾಠಿಗಳ ಜೊತೆಗೆ ಒಟ್ಟಾಗಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರಾದ ರೇವತಿ ಹಾಗೂ ಫಾತಿಮ ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿದುಬಂದಿದೆ.

Sneha Gowda

Recent Posts

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

12 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

22 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

8 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

9 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

9 hours ago