News Karnataka Kannada
Saturday, May 04 2024
ಮಂಗಳೂರು

ಉಳ್ಳಾಲ : ಅಂಗಡಿ ಮಳಿಗೆಯೊಳಗೆ ಮಾಲೀಕನ ಆತ್ಮಹತ್ಯೆ

ಪ್ರೀತಿಸಿದವರೊಂದಿಗೆ ವಿವಾಹವಾಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ ನಡೆದಿದೆ.
Photo Credit : IANS

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ಆತ್ಮಹತ್ಯೆಗೈದಿದ್ದು, ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಥ್ರೆಡ್ ಹೌಸ್ ಅಂಗಡಿಯನ್ಬು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು.

ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು‌ ಬೆಳಗ್ಗೆ 6.30ಕ್ಕೆ ಮನೆಯಿಂದ ಹೊರಟಿದ್ದು, ಅಂಗಡಿಯೊಳಗೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಅವರು ಆತ್ಮಹತ್ಯೆಗೈದ ಸ್ಥಳದಲ್ಲಿ ಚೀಟಿಯೊಂದರಲ್ಲಿ‌ನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆದು ಆತ್ಮಹತ್ಯೆಗೈದಿದ್ದಾರೆ. ಮೃತರು ತಾಯಿ, ಪತ್ನಿ ಪುತ್ರನನ್ಬು ಅಗಲಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು