News Karnataka Kannada
Tuesday, April 30 2024
ಮಂಗಳೂರು

ಉಳ್ಳಾಲ: ಪಶುಪಾಲನಾ ಇಲಾಖೆ ಸದೃಢಗೊಳಿಸಲು ಹಲವು ಯೋಜನೆಗಳ ರೂಪು- ಸುನಿಲ್ ಕುಮಾರ್

Several schemes have been formulated to strengthen the animal husbandry department: Sunil Kumar
Photo Credit : News Kannada

ಉಳ್ಳಾಲ: ಸರ್ಕಾರವು ಪಶುಪಾಲನಾ ಇಲಾಖೆಯನ್ನು ಸದೃಢಗೊಳಿಸಲು ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ ಹಾಗೂ ಖಾಲಿ ಹುದ್ದೆಗಳ ಭರ್ತಿಗೆ ಅತಿ ಶೀಘ್ರವಾಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ತಿಳಿಸಿದರು.

ಅವರು ಸೋಮವಾರ ತಲಪಾಡಿಯ ದೇವಿನಗರದಲ್ಲಿ ಆರ್ ಐ ಡಿ ಎಫ್-೨೪ ಯೋಜನೆಯಡಿ ನೂತನವಾಗಿ ನಿರ್ಮಾಣಗೊಂಡಿರುವ ತಲಪಾಡಿಯ ಪಶು ಚಿಕಿತ್ಸಾಲಯ, ಕೊಣಾಜೆ ಹಾಗೂ ಅಂಬ್ಲಮೊಗರು ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳ ಕಟ್ಟಡಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಈ ಪರಿಸರ ರೈತರ ವಿವಿಧ ಚಟುವಟಿಕೆಗಳಿಗೆ ಅನುಕೂಲವಾಗಬೇಕು, ಜಾನುವಾರುಗಳಿಗೆ ಸಕಾಲದಲ್ಲಿ ಅಗತ್ಯ ಚಿಕಿತ್ಸೆ ಲಭ್ಯವಾಗಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರದಿಂದ ಈ ಕ್ರಮ ವಹಿಸಲಾಗಿದೆ, ಪಶುಸಂಗೋಪನಾ ಇಲಾಖೆಗೆ ಹೊಸತನದ ಸ್ಪರ್ಶ ನೀಡಿರುವ ಸರ್ಕಾರ ಹೆಚ್ಚಿನ ಸಂಖ್ಯೆಯ ಪಶು ಚಿಕಿತ್ಸಾಲಯಗಳನ್ನು ನಿರ್ಮಾಣ ಮಾಡುತ್ತಿದೆ, ಮುಖ್ಯಮಂತ್ರಿಗಳ ವಿಶೇಷ ಆಸಕ್ತಿಯಿಂದ ಪಶುಸಂಗೋಪನ ಇಲಾಖೆಗೆ ಹೆಚ್ಚೆನ ಆದ್ಯತೆ ಲಭಿಸಿದೆ ಎಂದವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ ಅವರು ಮಾತನಾಡಿ, ಪ್ರಕೃತಿ, ಕೃಷಿ, ಹೈನುಗಾರಿಕೆ, ರೈತ ಭಾರತದ ಅವಿಭಾಜ್ಯ ಅಂಗವಾಗಿದ್ದು ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರುವ ಮೂಲಕ ರಾಜ್ಯ ಸರಕಾರ ನಿಜಕ್ಕೂ ಅಭೂತಪೂರ್ವ ಕೊಡುಗೆ ಜನತೆಗೆ ನೀಡಿದೆ. ಭಾರತೀಯ ಸಂಸ್ಕೃತಿ ಮತ್ತು ಅಭಿವೃದ್ಧಿ ಜತೆಯಾಗಿ ಕೊಂಡೊಯ್ಯುತ್ತಿರುವ ಕೇಂದ್ರ ಹಾಗೂ ರಾಜ್ಯ ಸರಕಾರ ಎಲ್ಲ ಕ್ಷೇತ್ರದಲ್ಲೂ ಗಣನೀಯ ಕೊಡುಗೆ ನೀಡಿದೆ ಎಂದರು.

ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಪಾಲಿ ಕ್ಲಿನಿಕ್ ಉಪ ನಿರ್ದೇಶಕ ಡಾ. ತಮ್ಮಯ್ಯ, ಉಳ್ಳಾಲ ನಗರ ಸಭೆ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂಚಲಾಕ್ಷಿ, ಉಪಾಧ್ಯಕ್ಷ ರಾಮಕೃಷ್ಣ ಪಟ್ಟೋರಿ, ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಶೆಟ್ಟಿ, ಉಪಾಧ್ಯಕ್ಷ ಫಯಾಝ್ ಪಿಲಿಕೂರು, ನಗರದ ಮಂಗಳಾದೇವಿ ಪಶುವೈದ್ಯ ವೈದ್ಯಾಧಿಕಾರಿ ರೇಖಾ, ಭಾಗವಹಿಸಿದ್ದರು.

ಬೆಂಗಳೂರಿನ ಎನ್.ಪಿ.ಸಿ.ಸಿ.ಎಲ್ ನ ಇಂಜಿನಿಯರ್ ಅಕ್ಷಯ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮಂಗಳೂರು ಮುಖ್ಯ ಪಶು ವೈದ್ಯಾಧಿಕಾರಿ ಡಾ. ಅಶೋಕ್ ಕೆ.ಆರ್. ಸ್ವಾಗತಿಸಿದರು. ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಡಳಿತ ವಿಭಾಗದ ಉಪನಿರ್ದೇಶಕ ಡಾ. ಅರುಣ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೋಹನ್ ಶಿರ್ಲಾಲ್ ನಿರೂಪಿಸಿದರು. ತಾಂತ್ರಿಕ ವಿಭಾಗದ ಉಪನಿರ್ದೇಶಕ ಡಾ. ವಸಂತ್ ಕುಮಾರ್ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು