News Karnataka Kannada
Friday, May 03 2024
ಮಂಗಳೂರು

ಉಳ್ಳಾಲ: ಅಬ್ಬಕ್ಕಳ ಕಾಲದಲ್ಲಿ ಹಿಂದೂ ಮುಸ್ಲಿಂ ಭೇದಭಾವ ಇರಲಿಲ್ಲ- ಶೋಭಾ ಕರಂದ್ಲಾಜೆ

There was no Hindu-Muslim discrimination in Abbakka's time: Shobha Karandlaje
Photo Credit : News Kannada

ಉಳ್ಳಾಲ: ವೀರರಾಣಿ ಅಬ್ಬಕ್ಕಳ ಕಾಲದಿಂದಲೂ ಉಳ್ಳಾಲ ಭಾವೈಕ್ಯತೆಯ ತಾಣವಾಗಿತ್ತು. ಪೋರ್ಚುಗೀಸರ ವಿರುದ್ಧ ಹೋರಾಡಲು ಅಬ್ಬಕ್ಕ ಸಹಾಯ ಪಡೆದದ್ದು ಅಂದಿನ ಕೇರಳದ ಕುಂಜಾಲಿಕುಟ್ಟಿ ಮಣಿಕರಣ್. ಅಬ್ಬಕ್ಕಳ ಕರೆಗೆ ಸ್ಪಂಧಿಸಿ ಸಹಾಯಹಸ್ತ ನೀಡಿ ಪೋರ್ಚುಗೀಸರನ್ನು ಸೋಲಿಸಿದ್ದರು. ಆಗ ಹಿಂದೂ ಮುಸ್ಲಿಂ ಎನ್ನುವ ಭೇದಭಾವ ಇರಲಿಲ್ಲಿ. ಸ್ವಾತಂತ್ರ್ಯ ನಂತರ ಜಾತಿ ಜಾತಿಗಳ ಮಧ್ಯೆ ಕಂದರಗಳು ನಿರ್ಮಾಣವಾಯಿತ್ತು. ಇಂತಹ ಭಾವೈಕ್ಯತೆಯ ವಿಚಾರಗಳನ್ನು ಥೀಮ್ ಪಾರ್ಕ್ ಮೂಲಕ ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯ ಆಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಆಶ್ರಯದಲ್ಲಿ ಉಳ್ಳಾಲ ನಗರ ಸಭೆ ಅಧೀನದ ಮಹಾತ್ಮ ಗಾಂಧಿ ರಂಗ ಮಂದಿರದಲ್ಲಿ ಶನಿವಾರ ನಡೆದ ವೀರ ರಾಣಿ ಅಬ್ಬಕ್ಕ ಉತ್ಸವ 2022-23ರ ಅಧ್ಯಕ್ಷತೆ ವಹಿಸಿ ಮಾತನಾಡಿ ಉಳ್ಳಾಲದ ವೀರರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮನಂತಹ ಸ್ವಾತಂತ್ರ್ಯ ಹೋರಾಟಗಾರರು ನಮ್ಮ ರಾಜ್ಯದ ಮಹಿಳೆಯರಿಗೆ ಪ್ರೇರಣಾ ಶಕ್ತಿಯಾಗಿದ್ದು, ಉಳ್ಳಾಲದಲ್ಲಿ ಅಬ್ಬಕ್ಕಳ ಶೌರ್ಯವನ್ನು ದೇಶ ವಿದೇಶಗಳಿಗೆ ತಿಳಿಸುವ ನಿಟ್ಟಿನಲ್ಲಿ ಅಬ್ಬಕ್ಕಳ ಹೆಸರಿನಲ್ಲಿ ಉಳ್ಳಾಲದಲ್ಲಿ ಥೀಮ್ ಪಾರ್ಕ್ ಆಗಬೇಕು, ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರು ಇಡಲು ಪ್ರದಾನಿಗೆ ಮತ್ತು ಸಂಬಂಧಿತ ಇಲಾಖೆಯ ಸಚಿವರಿಗೆ ಪತ್ರ ಬರೆದು ಒತ್ತಾಯಿಸುತ್ತೇನೆ. ಅಬ್ಬಕ್ಕಳ ಉತ್ಸವ ಕೇವಲ ಉಳ್ಳಾಲಕ್ಕೆ ಸೀಮಿತವಾಗಬಾರದು. ರಾಜ್ಯ ಮಟ್ಟದ ಉತ್ಸವವಾಗಿ ಸ್ವಾತಂತ್ರ್ಯ ಹೋರಾಟಗಾರರ ಉತ್ಸವ ಆಚರಿಸಲು ರಾಜ್ಯ ಸರಕಾರ ಮುಂದಾಗಬೇಕು. ಅಬ್ಬಕ್ಕ ಭವನ ನಿರ್ಮಾಣದ ಸಂದರ್ಭದಲ್ಲಿ ಸುಸಜ್ಜಿತ ಥಿಯೇಟರ್ ನಿರ್ಮಾಣ ಮಾಡಿ ಅವರ ಸಾಹಸ ಗಾಥೆಯನ್ನು ಚಿತ್ರೀಕರಣದ ಮೂಲಕ ಮಕ್ಕಳಿಗೆ ತಿಳಿಸುವ ಕಾರ್ಯ ಆಗಬೇಕು ಇದರೊಂದಿಗೆ ಪಠ್ಯಕ್ರಮದಲ್ಲೂ ಅಬ್ಬಕ್ಕಳ ಸಾಹಸಗಾಥೆಯನ್ನು ಅಳವಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದೊಂದಿಗೆ ಮಾತುಕತೆ ನಡೆಸುತ್ತೇನೆ ಎಂದರು.

ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪರಕೀಯರ ವಿರುದ್ಧ ಹೋರಾಡಿದ ಪ್ರಥಮ ಮಹಿಳೆ ವೀರರಾಣಿ ಅಬ್ಬಕ್ಕಳ ಹೆಸರನ್ನು ಚಿರಸ್ಥಾಯಿಯಾಗಿಸಲು ಕೇಂದ್ರ ಸರಕಾರ ನಿಧಿ ಸಂಚಯನ ಮಾಡಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಕ್ರಮ ಕೈಗೊಳ್ಳಬೇಕು ಅಬ್ಬಕ್ಕ ಭವನ ನಿರ್ಮಾಣದ ಕಾರ್ಯಕ್ಕೂ ಚಾಲನೆ ನೀಡಲು ಜಿಲ್ಲಾಡಳಿತ ಮುಂದಾಗಬೇಕು ಎಂದರು.

ವಿಧಾನ ಪರಿಷತ್ ಅಧ್ಯಕ್ಷ ಬಸವರಾಜ್ ಹೊರಟ್ಟಿ ಮಾತನಾಡಿ ಜಾತ್ಯಾತೀತ ಮನೋಭಾವನೆಯ ರಾಣಿ ಅಬ್ಬಕ್ಕಳ ವಿಚಾರಧಾರೆ ಪಠ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಿಳಿಸುವ ಕಾರ್ಯ ಆಗಬೇಕು. ರಾಣಿ ಅಬ್ಬಕ್ಕಳ ಭವನ ನಿರ್ಮಾಣಕ್ಕೆ ಸರಕಾರ ಅನುದಾನ ಬಿಡುಗಡೆ ಮಾಡಿದರೂ ಯಾವ ಕಾರಣಕ್ಕೆ ನಿರ್ಮಾಣ ಕಾರ್ಯ ಆರಂಭವಾಗಿಲ್ಲ ಎನ್ನುವ ವಿಚಾರವನ್ನು ಸಂಬಂ„ತ ಇಲಾಖೆಯೊಂದಿಗೆ ಚರ್ಚಿಸಿ ಈ ಕಾರ್ಯವನ್ನು ನಡೆಸಲು ಬೇಕಾದ ಅಡೆತಡೆಗಳನ್ನು ನಿರ್ವಹಿಸಲು ಪ್ರಯತ್ನಿಸುತ್ತೇನೆ ಎಂದರು.

ಕರ್ನಾಟಕ ವಿಧಾನಪರಿಷತ್ ಸದಸ್ಯ ಹಾಗೂ ಭರವಸೆ ಸಮಿತಿಯ ಅಧ್ಯಕ್ಷ ಬಿ.ಎ. ಫಾರೂಕ್ ಆಶಯ ಭಾಷಣ ನೆರವೇರಿಸಿದರು. ಕಾಂತಾರ ಚಲನಚಿತ್ರ ಖ್ಯಾತಿಯ ನಟಿ ವಿದುಷಿ ಮಾನಸಿ ಸುಧೀರ್ ಸಾಂಸ್ಕೃತಿಕ ಮತ್ತು ಸಾಹಿತ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪಾನೀರ್‍ನ ದಯಾಮಾತೆಯ ದೇವಾಲಯದ ಧರ್ಮಗುರು ವಂ| ಫಾ| ವಿಕ್ಟರ್ ಡಿಮೆಲ್ಲೋ ಶುಭಾಶಂಸನೆಗೈದರು. ಜಿಲ್ಲಾ„ಕಾರಿ ರವಿ ಕುಮಾರ್ ಎಂ. ಆರ್., ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕವಿತಾ,ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರನಾಥ್ ರೈ, ಭಾರತೀಯ ತೀಯಾ ಸಮಾಜದ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಳ್ಳಾಲ ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಗಂಗಾಧರ ಉಳ್ಳಾಲ್, ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಗೌರವ ಉಪಾಧ್ಯಕ್ಷರಾದ ಸದಾನಂದ ಬಂಗೇರ, ಹೈದರ್ ಪರ್ತಿಪ್ಪಾಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷ ವಸಂತ ಎನ್.ಕೊಣಾಜೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಂಗಳೂರು ಯೋಜನಾ„ಕಾರಿ ಚೆನ್ನಕೇಶವ, ಬ್ಯಾರಿ ಹಿತರಕ್ಷಣಾ ವೇದಿಕೆ ಅಧ್ಯಕ್ಷ ನಝೀರ್ ಉಳ್ಳಾಲ್, ನಗರಸಭಾ ಮಾಜಿ ಉಪಾಧ್ಯಕ್ಷೆ ಭವಾನಿ ಕಾಪಿಕಾಡು, ಜಬ್ಬಾರ್ ಭಾಗವಹಿಸಿದ್ದರು.

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಕೋಶಾಧಿಕಾರಿ ಆನಂದ ಕೆ. ಅಸೈಗೋಳಿ, ಉಪಾಧ್ಯಕ್ಷೆ ದೇವಕಿ ಆರ್. ಉಳ್ಳಾಲ್, ಉಪಾಧ್ಯಕ್ಷ ಆಲಿಯಬ್ಬ ಉಪಸ್ಥಿತರಿದ್ದರು.

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ ಉಳ್ಳಾಲ್ ಸ್ವಾಗತಿಸಿದರು. ಮಾಜಿ ಶಾಸಕ ಹಾಗೂ ಸ್ವಾಗತಾಧ್ಯಕ್ಷ ಜಯರಾಮ ಶೆಟ್ಟಿ ಕೆ.ಪ್ರಸ್ತಾವನೆಗೈದರು. ನಿವೃತ್ತ ಶಿಕ್ಷಕ ವಾಸುದೇವ ರಾವ್ ಕಾರ್ಯಕ್ರಮ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮಿ ಗಟ್ಟಿ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು