News Karnataka Kannada
Sunday, May 05 2024
ಮಂಗಳೂರು

ಉಳ್ಳಾಲ: ಎಂಡಿಎಂಎ ಡ್ರಗ್ಸ್ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Ullal: Two persons arrested for trying to sell MDMA drugs
Photo Credit : News Kannada

ಮಂಗಳೂರು: ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ.

ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪರದ ಸಮೀರ್ ಬಂಧಿತರು. ಇಬ್ಬರು ಆರೋಪಿಗಳು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14 ಗ್ರಾಂ ತೂಕದ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.

ಬಂಧಿತರಿಂದ 14 ಗ್ರಾಂ ಎಂಡಿಎಂಎ ,ಮೊಬೈಲ್ ಫೋನ್ ಗಳು ಸೇರಿದಂತೆ ಒಟ್ಟು ಒಂದು ಲಕ್ಷ ಹದಿನೆಂಟುವರೆ ಸಾವಿರ ಮೌಲ್ಯದ ಸೊತ್ತುಗಳನ್ನ ವಶಪಡಿಸಿ ಕೊಳ್ಳಲಾಗಿದೆ. ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ ಐ ಶೀತಲ್ ಹಾಗೂ ಸಿಬ್ಬಂದಿಗಳಾದ ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು