News Karnataka Kannada
Wednesday, May 01 2024
ಮಂಗಳೂರು

ಉಳ್ಳಾಲ: ಪಂಡಿತ್ ಹೌಸ್ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ, ಮಹಿಳಾ ಪಿಂಪ್ ಬಂಧನ

ಕಳ್ಳತನ
Photo Credit : Pexels

ಉಳ್ಳಾಲ: ಉಳ್ಳಾಲ ತಾಲೂಕಿನ ಪಂಡಿತ್ ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆಯಲ್ಲಿ ವೇಶ್ಯಾವಾಟಿಕೆ ನೇಯುತ್ತಿದ್ದುದರ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು, ಮತ್ತೋರ್ವ ಪಿಂಪ್ ತಲೆ ಮರೆಸಿಕೊಂಡಿದ್ದಾನೆ.

ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ, ವಿಟ್ಲಕೋಡಿ ನಿವಾಸಿ ರುಕಿಯಾ (50)ಬಂಧಿತ ಆರೋಪಿ. ರುಕಿಯಾ ವಿಜೇತ ನಗರದ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನಿಟ್ಟು ವೇಶ್ಯಾ ವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್ ಅವರು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್ ಜಿ.ಎಸ್, ಉಪ‌ನಿರೀಕ್ಷಕರಾದ ಮಂಜುಳಾ.ಎಲ್ ನೇತೃತ್ವದಲ್ಲಿ ನಿನ್ನೆ ರಾತ್ರಿ ಅಡ್ಡೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಮೂವರು ಗಿರಾಕಿಗಳನ್ನ ವಶಕ್ಕೆ ಪಡೆದ ಪೊಲೀಸರು ನಾಲ್ವರು ನೊಂದ ಯುವತಿಯರನ್ನ ರಕ್ಷಿಸಿದ್ದಾರೆ. ಪ್ರಮುಖ ಪಿಂಪ್ ಲತೀಫ್ ಎಂಬಾತ ಪರಾರಿಯಾಗಿದ್ದಾನೆ.

ಬಂಧಿತ ಆರೋಪಿಯಿಂದ 3 ದ್ವಿಚಕ್ರ ವಾಹನಗಳು,9 ಮೊಬೈಲ್ ಫೋನ್ ಗಳು, 5,000 ನಗದು ಸೇರಿದಂತೆ ಒಟ್ಟು 1,76,580 ರೂಪಾಯಿ ಮೌಲ್ಯದ ಸೊತ್ತನ್ನ ವಶ ಪಡಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್ ಎನ್, ದಾಕ್ಷಾಯಿಣಿ,ಲಕ್ಷ್ಮಿ, ಎಸಿಪಿ ರೌಡಿ ನಿಗ್ರಹದಳ ಸಿಬ್ಬಂದಿ ರೆಜಿ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು