ಉಳ್ಳಾಲ: ಸ್ನೇಹಿತೆಯೊಂದಿಗೆ ಬೀಚ್ಗೆ ಬಂದಿದ್ದ ಯುವತಿ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆಯಲ್ಲಿ ನಡೆದಿದೆ. ಮಂಗಳೂರಲ್ಲಿ ಕಾಲೇಜು ವಿದ್ಯಾಭ್ಯಾಸ ಮಾಡುತ್ತಿದ್ದ ಮೂಲತ: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕು ತೆಗ್ಗಿ ಗ್ರಾಮದ ನಿವಾಸಿ ಕಾವೇರಿ(20)ಮೃತ ಪಟ್ಟವರು.
ಕಾವೇರಿ ನಿನ್ನೆ ಹುಟ್ಟು ಹಬ್ಬ ಆಚರಿಸಿದ್ದು ಇಂದು ತನ್ನ ಬಾಲ್ಯ ಸ್ನೇಹಿತೆ ಕಾವೇರಿಯೊಂದಿಗೆ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದಳು. ಸ್ನೇಹಿತೆಯರಿಬ್ಬರು ಸಮುದ್ರ ತೀರದ ರುದ್ರ ಪಾದೆಯಲ್ಲಿ ವಿಹರಿಸುತ್ತಿದ್ದ ವೇಳೆ ಕಾವೇರಿ ಆಯ ತಪ್ಪಿ ಸಮುದ್ರಕ್ಕೆ ಬಿದ್ದಿದ್ದಾಳೆ. ಕೂಡಲೇ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಈಜು ರಕ್ಷಕ ಸಿಬ್ಬಂದಿ ಕಾವೇರಿಯನ್ನ ದಡಕ್ಕೆ ಎಳೆ ತಂದರೂ ಅಷ್ಟರಲ್ಲಿ ಕಾವೇರಿಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು.