News Karnataka Kannada
Friday, May 03 2024
ಮಂಗಳೂರು

ಉಳ್ಳಾಲ: ಸೋಮೇಶ್ವರ, ಸೋಮನಾಥ ಕ್ಷೇತ್ರಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ

Ullala: Governor Gehlot visits Someshwara
Photo Credit : News Kannada

ಉಳ್ಳಾಲ: ಮಂಗಳೂರು ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪುರಾಣ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬುಧವಾರದಂದು ಭೇಟಿ ನೀಡಿದರು.

ಸೋಮನಾಥೇಶ್ವರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿ.ರವೀಂದ್ರನಾಥ ರೈ ಅವರು ರಾಜ್ಯಪಾಲರನ್ನ ಬರಮಾಡಿಕೊಂಡರು.ಸೋಮನಾಥನಿಗೆ ರಾಜ್ಯಪಾಲರು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಸೋಮೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ರಾಜ್ಯಪಾಲರು ಬಿಡುಗಡೆಗೊಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಮ್.ಆರ್, ಮಂಗಳೂರು ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್,ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿ ಶ್ವೇತ ಪಳ್ಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಭಗವತೀಶ್ ಅಡ್ಕ,ವಸಂತ್ ಉಳ್ಳಾಲ್, ಯು.ಸದಾನಂದ ಬಂಗೇರ, ಪವಿತ್ರ ಕುಮಾರ್ ಗಟ್ಟಿ, ಹರಿಣಾಕ್ಷಿ ಕೊಲ್ಯ,ಮಾಧವಿ ಉಳ್ಳಾಲ್, ಪ್ರದಾನ ಅರ್ಚಕರಾದ ಸೂರ್ಯನಾರಾಯಣ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು