News Karnataka Kannada
Monday, April 29 2024
ಮಂಗಳೂರು

ವಿವಿ ಕಾಲೇಜು ಮಂಗಳೂರು: ಪದವಿ ತರಗತಿಗಳಿಗೆ ಪ್ರವೇಶಾತಿ ಆರಂಭ

University College Mangalore: Admission open for UG Programs
Photo Credit : News Kannada

ಮಂಗಳೂರು: ಸುಮಾರು 155 ವರ್ಷಗಳ ಭವ್ಯ ಇತಿಹಾಸವಿರುವ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಮುಖ ಘಟಕ ಕಾಲೇಜಾಗಿರುವ ನ್ಯಾಕ್ ‘ಎ’ ಗ್ರೇಡ್ ಹೊಂದಿದ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು (ಹಿಂದಿನ ಸರಕಾರಿ ಕಾಲೇಜು) ಇಲ್ಲಿ 2023-24ನೇ ಶೈಕ್ಷಣಿಕ ಸಾಲಿನ ವಿವಿಧ ಪದವಿ ಕಾರ್ಯಕ್ರಮಗಳಿಗಾಗಿ ಪ್ರವೇಶಾತಿ ಪ್ರಕ್ರಿಯೆ ಆರಂಭಿಸಲಾಗಿದೆ.

ನಗರದ ಹೃದಯ ಭಾಗದಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿ ಆಸಕ್ತ ವಿದ್ಯಾರ್ಥಿಗಳಿಗೆಕಲೆ, ವಿಜ್ಞಾನ, ವಾಣಿಜ್ಯ ಹಾಗೂ ವ್ಯವಹಾರ ಆಡಳಿತ ಶಾಸ್ತ್ರ ವಿಭಾಗಗಳ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯ್ದುಕೊಳ್ಳುವ ಅವಕಾಶವಿದೆ.

ಕಲಾ ವಿಭಾಗದಲ್ಲಿ ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಭೂಗೋಳಶಾಸ್ತ್ರ, ಇಂಗ್ಲೀಷ್, ಕನ್ನಡ, ಹಿಂದಿ, ಸಂಸ್ಕೃತ, ಪತ್ರಿಕೋದ್ಯಮ, ಪ್ರವಾಸೋದ್ಯಮ ವಿಷಯಗಳನ್ನು ಕಲಿಯುವ ಅವಕಾಶವಿದೆ. ವಿಜ್ಞಾನ ವಿಭಾಗದಲ್ಲಿ ಭೌತ ಶಾಸ್ತ್ರ, ಗಣಿತಶಾಸ್ತ್ರ, ಗಣಕ ವಿಜ್ಞಾನ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಸೂಕ್ಷ್ಮಾಣುಜೀವಶಾಸ್ತ್ರ ವಿಷಯಗಳನ್ನು ಆಯ್ದುಕೊಳ್ಳಬಹುದು. ಇದರ ಹೊರತಾಗಿ ಬಿ.ಕಾಂ ಹಾಗೂ ಬಿಬಿಎ (ಟೂರಿಸಂ & ಟ್ರಾವೆಲ್) ಕಾರ್ಯಕ್ರಮಗಳನ್ನು ಆರಿಸಿಕೊಳ್ಳಬಹುದು.

ಆಸಕ್ತ ವಿದ್ಯಾರ್ಥಿಗಳು ಕಾಲೇಜಿನ ಕಚೇರಿಗೆ ಭೇಟಿ ನೀಡಿ ಅರ್ಜಿಯ ಪ್ರತಿಗಳನ್ನು ಪಡೆದುಕೊಳ್ಳಬಹುದಾಗಿದೆ. ಆನ್‌ಲೈನ್ ದಾಖಲಾತಿಗಾಗಿnhttps://uucms.karnataka.gov.in/Login/OnlineStudentRegistrationForm ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೆಬ್‌ಸೈಟ್ https://universitycollegemangalore.com/ ಗೆ ಭೇಟಿ ನೀಡಬಹುದಾಗಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು