News Karnataka Kannada
Tuesday, April 23 2024
Cricket
ಮಂಗಳೂರು

ಜನರ ಭಾವನಗೆಗಳಿಗೆ ವಿರುದ್ಧವಾಗಿ ಕೆಲಸ ಮಾಡಿದಲ್ಲಿ ಜಿಲ್ಲೆಯಲ್ಲಿ ಅಶಾಂತಿ: ನಳಿನ್‌

Unrest in district if it works against people's sentiments: Nalin
Photo Credit : News Kannada

ಮಂಗಳೂರು: ರಾಜ್ಯದಲ್ಲಿ ಗೋ ಹತ್ಯಾ ನಿಷೇಧ ಕಾಯಿದೆ ವಾಪಸ್ ಕುರಿತು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಗೋ ಸಂಸ್ಕೃತಿ ಇದೆ, ಕೃಷಿ, ಜೀವನ, ಆರಾಧನೆ ಎಲ್ಲದಕ್ಕೂ ಗೋವು ಆಧಾರವಾಗಿದೆ. ಗೋ ರಕ್ಷಣೆಗಾಗಿ ಬಿಜೆಪಿ ಗೋ ಹತ್ಯೆ ನಿಷೇಧ ಕಾನೂನು ಜಾರಿ ಮಾಡಿತ್ತು ಮಹಾತ್ಮಾ ಗಾಂಧಿಯೂ ಗೋಸಂರಕ್ಷಣೆ ಆಗಬೇಕೆಂದು ಹೇಳಿದ್ದರು.

ಕೆಲ ಆಚರಣೆ ವೇಳೆ ಗೋ ಹತ್ಯೆ ಆಗುತ್ತಿದೆ. ಗೋವುಗಳ ರಕ್ಷಣೆಗಾಗಿ ನಾವು ಕಾನೂನು ತಂದಿದ್ದೆವು. ಕಾನೂನು ಜಾರಿಯಲ್ಲಿರುವಾಗ ಗೋ ಕಳ್ಳತನ, ಗೋ ಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

ಈ ಬಗ್ಗೆ ಪ್ರಿಯಾಂಕ ಖರ್ಗೆ ಎಚ್ಚರಿಕೆಯಿಂದ ಮಾತನಾಡಬೇಕು. ಜನರ ಆಶಯಗಳಿಗೆ ಸರ್ಕಾರ ಗೌರವ ನೀಡಬೇಕು. ಪೊಲೀಸರೂ ಗೋ ಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಜನರ ಭಾವನೆಗಳಿಗೆ ವಿರುದ್ಧವಾದ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಹೀಗಾದಲ್ಲಿ ಜಿಲ್ಲೆಯಲ್ಲಿ ಅಶಾಂತಿ ನಿರ್ಮಾಣ ಆಗುವುದು ಖಂಡಿತ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು