News Karnataka Kannada
Tuesday, April 30 2024
ಮಂಗಳೂರು

ಉಪ್ಪಿನಂಗಡಿ: ಪೆರ್ನೆ ಅಡುಗೆ ಅನಿಲ ದುರಂತ, ಹತ್ತು ವರ್ಷ ಸಂದರೂ ಮಾಸದ ಕಹಿ ನೆನಪು

Perne cooking gas tragedy, 10 years on, but the bitter memories of the month
Photo Credit : News Kannada

ಉಪ್ಪಿನಂಗಡಿ: 2013 ಎಪ್ರಿಲ್ 9 ರಂದು ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿ ಅಡುಗೆ ಅನಿಲ ಸಾಗಾಟದ ಟ್ಯಾಂಕರ್ ಅಪಘಾತಕ್ಕೀಡಾಗಿ ಅನಿಲ ಸೋರಿಕೆಯೊಂದಿಗೆ ಅಗ್ನಿ ಅನಾಹುತ ಸಂಭವಿಸಿದ ಭೀಕರ ಘಟನೆಯಿಂದ ಹಲವು ಕುಟುಂಬಗಳಿಗೆ ಸೇರಿದ 13 ಮಂದಿ ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡ ಘಟನೆಗೆ ಹತ್ತು ವರ್ಷ ಸಂದರೂ ಅದರ ಕಹಿ ನೆನಪು ಇನ್ನೂ ಮಾಸದೆ ಅಚ್ಚಳಿಯದೆ ಉಳಿದಿದೆ.

ಮಂಗಳೂರಿನಿಂದ ಬೆಂಗಳೂರಿನತ್ತ ಅನಿಲ ಸಾಗಾಟದ ಟ್ಯಾಂಕರ್ ಪೆರ್ನೆ ತಿರುವಿನಲ್ಲಿ ಅಪಘಾತಕ್ಕೀಡಾಗಿ ಮಗುಚಿ ಬಿದ್ದು, ಅನಿಲ ಸೋರಿಕೆಯುಂಟಾಗಿ ಅಗ್ನಿ ಸ್ಪರ್ಶಗೊಂಡ ಕಾರಣ ಬೆಂಕಿಯ ಕೆನ್ನಾಲಿಗೆಯು ಪರಿಸರದಾದ್ಯಂತ ವ್ಯಾಪಿಸಿ ಮನೆ, ಅಂಗಡಿಯೊಳಗಿದ್ದ ಜನರೆಲ್ಲಾ ಬೆಂಕಿಗೆ ಸಿಲುಕಿದರು.

ಇದರಿಂದಾಗಿ ಮಹಿಳೆ ಮಕ್ಕಳನ್ನು ಒಳಗೊಂಡಂತೆ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಾಯಾಳುಗಳ ಪೈಕಿ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸಿಲುಕಿ ಮೈಯಲ್ಲಿದ್ದ ಬಟ್ಟೆ ಬರೆಯೆಲ್ಲಾ ಸುಟ್ಟು, ಮೈ ಚರ್ಮ ಸುಟ್ಟು ಜೀವ ಉಳಿಸಲು ಯುವಕನೋರ್ವ ಹೆದ್ದಾರಿಯಲ್ಲಿ ಓಡೋಡಿ ಬರುತ್ತಿರುವ ಹೃದಯ ವಿದ್ರಾವಕ ಘಟನೆಯು ವಿಡಿಯೋ ಚಿತ್ರೀಕರಣದಲ್ಲಿ ಸೆರೆಯಾಗಿದ್ದು, ಮನ ಕಲಕುವಂತಿತ್ತು. ಅಂದು ಟ್ಯಾಂಕರ್ ದುರಂತ ಸಂಭವಿಸಿದ ಬಳಿಕ ಸಂತ್ರಸ್ತರಿಗೆ ನ್ಯಾಯ ಒದಗಿಸಿಕೊಡಲು ಕೋಡಿಂಬಾಡಿ ಎಸ್ಟೇಟ್ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್‌ನ ಪ್ರವರ್ತಕ ಅಶೋಕ್ ಕುಮಾರ್ ರೈಯವರು ಸಂತ್ರಸ್ಥರ ಹೋರಾಟ ಸಮಿತಿ ರೂಪಿಸಿ ಹೋರಾಟ ಮಾಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು