News Karnataka Kannada
Saturday, April 20 2024
Cricket
ಮಂಗಳೂರು

ರೈಲ್ವೆ ವಿದ್ಯುದೀಕರಣ ಕಾಮಗಾರಿ ಬಳಿಕ ಮಂಗಳೂರಿಗೆ ವಂದೇ ಭಾರತ್‌ ರೈಲು: ನಳಿನ್‌

Vande Bharat train to Mangaluru after railway electrification work: Nalin
Photo Credit : News Kannada

ಪುತ್ತೂರು: ರೈಲ್ವೇ ವಿದ್ಯುದೀಕರಣ ಕಾಮಗಾರಿಗೆ ಅರಣ್ಯ ಇಲಾಖೆ ತಡೆಯೊಡ್ಡಿದ್ದು, ಇದೇ ಕಾರಣದಿಂದ ಮಂಗಳೂರಿಗೆ ವಂದೇ ಭಾರತ್‌ ರೈಲು ಪರಿಚಯಿಸಲು ವಿಳಂಬವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

ಪುತ್ತೂರಿನಲ್ಲಿ ಮಾತನಾಡಿದ ಅವರು ಮಂಗಳೂರು-ಬೆಂಗಳೂರು-ಮೈಸೂರು ಸಂಪರ್ಕ ರೈಲ್ವೆ ವಿದ್ಯುದೀಕರಣ ಕಾಮಗಾರಿ ಆರಂಭಗೊಂಡಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ವಂದೇ ಭಾರತ್‌ ರೈಲು ಆಗಮಿಸಲಿದೆ ಎಂದು ತಿಳಿಸಿದರು. ಜಿಲ್ಲೆಯ ಹಲವು ಕಡೆಗಳಲ್ಲಿ ಅಂಡರ್ ಪಾಸ್ ಮತ್ತು ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದೆ ಎಂದು ವಿವರಿಸಿದರು.

ಇನ್ನು ವಿಪಕ್ಷಗಳ ಸಭೆ ಕುರಿತು ಮಾತನಾಡಿದ ನಳಿನ್‌, ಕಾಂಗ್ರೆಸ್ ಗೆ ಪ್ರಧಾನಿಗಳನ್ನು ಅಧಿಕಾರದಿಂದ ಇಳಿಸಿದ ಇತಿಹಾಸವಿದೆ. ವಿ.ಪಿ.ಸಿಂಗ್, ಹೆಚ್.ಡಿ.ದೇವೇಗೌಡ ರನ್ನು ಪ್ರಧಾನಿ ಮಾಡಿ ಕಾಂಗ್ರೆಸ್ ಕೆಳಗಿಳಿಸಿದೆ. ಇಂದು ದೇಶ ಕಾಂಗ್ರೆಸ್ ಮುಕ್ತವಾಗಿದೆ.

ದೇಶದಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುವ ಅರ್ಹತೆ ಹೊಂದಿಲ್ಲ. ದೇಶದಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಹಲವು ಷಡ್ಯಂತ್ರಗಳನ್ನು ಮಾಡುತ್ತಿದೆ. ಇದರಲ್ಲಿ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಸಫಲವಾಗುವುದಿಲ್ಲ ಎಂದರು. ಕಳೆದ ಬಾರಿಯೂ ಇದೇ ರೀತಿ ಮಾಡಿದ್ದಾರೆ. ಮೋದಿ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಲಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು