News Karnataka Kannada
Saturday, April 27 2024
ಮಂಗಳೂರು

ಬೆಳ್ತಂಗಡಿ: ವೀರೇಂದ್ರ ಹೆಗ್ಗಡೆಯವರ ನೂತನ ಕಾರ್ಯಾಲಯ ಆ.11ರಂದು ಶುಭಾರಂಭ

Belthangady: Dr. Veerendra Heggade celebrates his 75th birthday today
Photo Credit : Wikimedia

ಬೆಳ್ತಂಗಡಿ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡು ಪ್ರಮಾಣವಚನ ಸ್ವೀಕರಿಸಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ (ಸಂಸದರ) ನೂತನ ಕಾರ್ಯಾಲಯ ಗುರುವಾರ ( ಆ.11) ಬೆಳಿಗ್ಗೆ ಹತ್ತು ಗಂಟೆಗೆ ಧರ್ಮಸ್ಥಳದಲ್ಲಿ ಮಂಜೂಷಾ ವಸ್ತುಸಂಗ್ರಹಾಲಯದ ಬಳಿ ಇರುವ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸಂಸದರ ಆಪ್ತ ಕಾರ್ಯದರ್ಶಿ ಕೆ.ಎನ್ ಜನಾರ್ದನ್ ಮತ್ತು ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

ಶಾಸಕ ಹರೀಶ್ ಪೂಂಜ ನೂತನ ಕಾರ್ಯಾಲಯವನ್ನು ಉದ್ಘಾಟಿಸುವರು. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಶಾಸಕರುಗಳಾದ ಕೆ. ಪ್ರತಾಪಸಿಂಹ ನಾಯಕ್ ಮತ್ತು ಕೆ. ಹರೀಶ್ ಕುಮಾರ್ ಶುಭಾಶಂಸನೆ ಮಾಡುವರು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು