News Karnataka Kannada
Sunday, April 28 2024
ಮಂಗಳೂರು

ವೇಣೂರು: ಪೆರಿಂಜೆಯಲ್ಲಿ ಭೀಕರ ರಸ್ತೆ ಅಪಘಾತ, ಪ್ರಯಾಣಿಕರು ಗಂಭೀರ

Road accident at Perinje, passengers critical
Photo Credit : News Kannada

ವೇಣೂರು: ವೇಣೂರು-ಮೂಡಬಿದಿರೆ ರಾಜ್ಯಹೆದ್ದಾರಿ ಪೆರಿಂಜೆ ಬಂಡಸಾಲೆ ಬಳಿ ಇಂದು ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಚಾಲಕ ಸೇರಿದಂತೆ ಐವರು ಗಂಭೀರ ಗಾಯಗೊಂಡಿದ್ದಾರೆ.

ಆಟೋ ರಿಕ್ಷಾ (ಕೆಎ ೨೦, ಎಎ೭೯೫೬) ಮೂಡಬಿದಿರೆ ಕಡೆಯಿಂದ ವೇಣೂರು ಕಡೆಗೆ ಬರುತ್ತಿದ್ದ ವೇಳೆ ಪೆರಿಂಜೆ ಬಂಡಸಾಲೆ ಬಳಿ ವೇಣೂರು ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆಯಿತು ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಆಟೋ ರಿಕ್ಷಾ ಪಲ್ಟಿ ಹೊಡೆದು ಜಖಂಗೊಂಡಿದೆ.

ರಿಕ್ಷಾ ಚಾಲಕ ಮತ್ತು ಅದರಲ್ಲಿ ಪ್ರಯಾಣಿಸಿದ್ದ ಮಹಿಳೆ ಮತ್ತು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇದರಲ್ಲಿ ಓರ್ವ ಬಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಚಾಲಕ ಸೇರಿ ಮೂವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಕಾರು ಚಾಲಕ ತುಮಕೂರಿನ ಪ್ರಸಾದ್ ವಿರುದ್ಧ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು