News Karnataka Kannada
Monday, April 22 2024
Cricket
ಮಂಗಳೂರು

ಗೋ ಹತ್ಯೆಗೆ ಅವಕಾಶ ನೀಡದಂತೆ ವಿ.ಹಿಂ.ಪ ನಿಂದ ಪೋಲಿಸ್ ಅಧಿಕಾರಿಗಳಿಗೆ ಮನವಿ

Puttur
Photo Credit : News Kannada

ಮಂಗಳೂರು: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020 ಹಾಗೂ ಕರ್ನಾಟಕ ಪ್ರಾಣಿ ಬಲಿ ನಿಷೇಧ 1959 ( ತಿದ್ದುಪಡಿ 1975 )ಇದು ಜಾರಿಯಲ್ಲಿದ್ದು ಅದರ ಪ್ರಕಾರ ಯಾವುದೇ ಗೋವಂಶ ( ಯಾವುದೇ ವಯಸ್ಸಿನ ದನ,ಎತ್ತು,ಹೋರಿ ಕರುಗಳ) ಗಳ ಬಲಿ / ಕುರ್ಬಾನಿ/ ಹತ್ಯೆ ಮಾಡುವುದನ್ನು ನಿಷೇಧಿಸಲಾಗಿದೆ.

ಇದೇ ಜೂನ್ 29,30 ಮತ್ತು ಜುಲೈ 1 ರಂದು ಕುರ್ಬಾನಿಯ ಸಾಧ್ಯತೆಗಳಿದ್ದು, ಈ ತಾರಿಖಿನಂದು ಹಾಗೂ ಇತರೆ ದಿನಗಳಂದು ಯಾವುದೇ ರೀತಿಯ ಗೊವಂಶ ವಧೆ/ಬಲಿ/ಕುರ್ಬಾನಿ/ ಹತ್ಯೆ ಹಾಗೂ ಅಕ್ರಮ ಗೋಸಾಗಾಟವಾಗದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೇಂದು ಅಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ಪುತ್ತೂರು ನಗರ ಪೋಲಿಸ್ ಠಾಣೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ,ಬಜರಂಗದಳ ಜಿಲ್ಲಾ ಸುರಕ್ಷ ಪ್ರಮುಖ್ ಜಯಂತ್ ಕುಂಜೂರುಪಂಜ,ಬಜರಂಗದಳ ಪುತ್ತೂರು ನಗರ ಪ್ರಖಂಡ ಸಂಯೋಜಕರಾದ ಹರೀಶ್ ದೋಳ್ಪಾಡಿ,ಪುತ್ತೂರು ನಗರ ಪ್ರಖಂಡ ಪ್ರಚಾರ ಪ್ರಸಾರ ಪ್ರಮುಖ್ ಭರತ್ ಬಲ್ನಾಡು,ಗ್ರಾಮಾಂತರ ಪ್ರಖಂಡ ಸಾಪ್ತಾಹಿಕ ಮಿಲನ್ ಪ್ರಮುಖ್ ಪ್ರಜ್ವಲ್ ಸಂಪ್ಯ,ಗ್ರಾಮಾಂತರ ಪ್ರಖಂಡ ಸುರಕ್ಷಾ ಪ್ರಮುಖ್ ದಿನೇಶ್ ತಿಂಗಳಾಡಿ,ಪ್ರಮುಖರಾದ ಧನರಾಜ್ ಬೆಳ್ಳಿಪ್ಪಾಡಿ,ಯಕ್ಷಿತ್,ನಿಶಾಂತ್,ಪ್ರದೀಪ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು