News Karnataka Kannada
Thursday, May 02 2024
ಮಂಗಳೂರು

ಧರ್ಮದ ಅವಹೇಳನ ಪ್ರಕರಣ: ಎಫ್ಐಆರ್ ಖಂಡಿಸಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ

ಮಂಗಳೂರು ಜೇರೋಸಾ ಶಾಲೆಯ ಶಿಕ್ಷಕಿಯಿಂದ ಧರ್ಮದ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧದ ಎಫ್ ಐ ಆರ್ ಖಂಡಿಸಿ ವಿಶ್ವ ಹಿಂದು ಪರಿಷತ್ ಬಜರಂಗದಳದ ವತಿಯಿಂದ ಪ್ರತಿಭಟನೆ ನಡೆಯಿತು.
Photo Credit : News Kannada

ಮಂಗಳೂರು: ಮಂಗಳೂರು ಜೇರೋಸಾ ಶಾಲೆಯ ಶಿಕ್ಷಕಿಯಿಂದ ಧರ್ಮದ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧದ ಎಫ್ ಐ ಆರ್ ಖಂಡಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಪ್ರತಿಭಟನೆ ನಡೆಯಿತು.

ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಬಜರಂಗದಳ ಕಾರ್ಯಕರ್ತರು  ಪ್ರತಿಭಟನೆ ನಡೆಸಿದರು.

ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಶರಣ್ ಪಂಪ್ವೆಲ್  ಜೈಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಎಫ್ಐಆರ್ ಹಾಕಿದ ವಿರುದ್ಧ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಜೈಶ್ರೀರಾಮ್ ಘೋಷಣೆ ಕೂಗುತಿದ್ದ ನೂರಾರು ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇನ್ನು ಪ್ರತಿಭಟನೆಯಲ್ಲಿ ಶಿಕ್ಷಕಿ ಪ್ರಭಾ ಬಂಧನಕ್ಕೆ ಆಗ್ರಹ ಕೇಳಿ ಬಂದಿದ್ದು, ಬಂಧಿಸಿ ಬಂಧಿಸಿ ಶಿಕ್ಷಕಿ ಪ್ರಭಾ ಬಂಧಿಸಿ ಎಂದು ಘೋಷಣೆ ಕೂಗಿದ್ದಾರೆ.

ರಾಮ ವಿರೋಧಿ ಸರಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗುತ್ತಾ ಕಮಿಷನರ್ ಕಚೇರಿಗೆ ಬಜರಂಗದಳ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಖಾಕಿ ಪಡೆ ಕಾರ್ಯಕರ್ತರನ್ನ ಚದುರಿಸಿ ಆಕ್ರೋಷಿತ ಬಜರಂಗದಳ ಕಾರ್ಯಕರ್ತರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು