ವಿಟ್ಲ: ಬಾಕಿಲಗುತ್ತುವಿನಲ್ಲಿ ಪ್ರತಿಷ್ಠಾ ವರ್ಧಂತಿ, ವಾರ್ಷಿಕ ನೇಮೋತ್ಸವ ಸಂಪನ್ನ

ವಿಟ್ಲ: ಬಂಟ್ವಾಳ ತಾಲೂಕಿನ ಅನಂತಾಡಿ ಶ್ರೀ ಉಳ್ಳಾಲ್ತಿ ವೈದ್ಯನಾಥೇಶ್ವರ, ಹೊಸಮ್ಮ, ಶ್ರೀ ಬ್ರಹ್ಮಬೈದರ್ಕಳ ಗರಡಿ, ಅಣ್ಣಪ್ಪ ಪಂಜುರ್ಲಿ ಪರಿವಾರ ದೈವಗಳ ಕ್ಷೇತ್ರ ಬಾಕಿಲಗುತ್ತುವಿನಲ್ಲಿ ಫೆ.೧ರಂದು ಬೆಳಗ್ಗೆ ಹೋಮ ಪಂಚಕಜ್ಜಾಯ ನಡೆಯಿತು. ಸಾಯಂಕಾಲ ಅಣ್ಣಪ್ಪ ಪಂಜುರ್ಲಿ, ಕಲ್ಲುರ್ಟಿ ಪಂಜುರ್ಲಿ ಭಂಡಾರ ಇಳಿಯಿತು. ಸಾಯಂಕಾಲ ಅಣ್ಣಪ್ಪ ಪಂಜುರ್ಲಿ ಕೋಲ ನಡೆಯಿತು. ರಾತ್ರಿ ಕಲ್ಲುರ್ಟಿ ಪಂಜುರ್ಲಿ ಕೋಲ ನಡೆಯಿತು.

ಫೆ.೨ರಂದು ಸಾಯಂಕಾಲ ಬಾಕಿಲ ಗುತ್ತು ಧರ್ಮಚಾವಡಿಯಿಂದ ಬೈದೇರುಗಳ ಕಿರುವಾಳು ತೆಗೆದು ಬಳಿಕ ಬ್ರಹ್ಮರ ಬಲಿ ನಡೆಯಿತು. ಸಾಯಂಕಾಲ ಬೈದೇರುಗಳು ಗರಡಿ ಇಳಿದು ಮಾಯಂದಾಲ್ ಗರಡಿ ಇಳಿದು, ಬೈದೇರುಗಳು ಸುರಿಯ ಹಾಕುವ ಕಾರ್ಯಕ್ರಮದ ಬಳಿಕ ಪ್ರಸಾದ ವಿತರಣೆ ನಡೆಯಿತು. ಫೆ.೩ರಂದು ಗುಳಿಗ ಕೋಲ ನಡೆಯಿತು.

ಬಾಕಿಲ ಗುತ್ತು ಆಡಳಿತ ಟ್ರಸ್ಟ್ ನ ಅಧ್ಯಕ್ಷರಾದ ವಸಂತ ಪೂಜಾರಿ ಎ. ಮಂಗಳೂರು, ಪ್ರಧಾನ ಕಾರ್ಯದರ್ಶಿ ಹರೀಶ್ ಸಾಲ್ಯಾನ್ ಮಂಗಳೂರು, ಕೋಶಾಧಿಕಾರಿ ಲಕ್ಷ್ಮಣ ಪೂಜಾರಿ ಬಾಕಿಲಗುತ್ತು, ಜತೆಕಾರ್ಯದರ್ಶಿ ಸಂಕಪ್ಪ ಪೂಜಾರಿ ಮಾಡಾವು, ಟ್ರಸ್ಟಿಗಳಾದ ಜನಾರ್ದನ ಪೂಜಾರಿ ಬಾಕಿಲಗುತ್ತು, ಸುರೇಶ್ ಸಾಲ್ಯಾನ್ ಬಾಕಿಲಗುತ್ತು, ಶೈಲೇಶ್ ಕುಮಾರ್ ಅಗತ್ತಾಡಿ, ಚಂದ್ರಶೇಖರ ಗೋಳಿಕಟ್ಟೆ, ಪುಷ್ಪ ಬಾಕಿಲಗುತ್ತು, ಕೃಷ್ಣ ಶಾಂತಿ ಪಾಣೆರಮಜಲು, ವಾರಿಜ ವಸಂತ ಸುವರ್ಣ ಕೆಂಗುಡೆಲು, ಕುಟುಂಬಸ್ಥರು‌ ಸೇರಿದಂತೆ ನೂರಾರು ಭಕ್ತಾಧಿಗಳು ಉಪಸ್ಥಿತರಿದ್ದರು.

Gayathri SG

Recent Posts

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

41 seconds ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

13 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

16 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

31 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

46 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

54 mins ago