Categories: ಮಂಗಳೂರು

ಮಂಗಳೂರು| ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಹರೇಕಳ-ಅಡ್ಯಾರು ನಡುವೆ ಸಂಪರ್ಕ ದೋಣಿ ಸ್ಥಗಿತ

ಮಂಗಳೂರು: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ, ಹರೇಕಳ-ಅಡ್ಯಾರು ನಡುವೆ ಸಂಪರ್ಕ ದೋಣಿ ಸ್ಥಗಿತ. ಕಾಮಗಾರಿ ಪ್ರಗತಿಯಲ್ಲಿರುವ ಡ್ಯಾಂ/ಸೇತುವೆಯಲ್ಲಿ ನಡೆದುಕೊಂಡು ಹೋಗಲು ಅನುಮತಿ ಕೋರಿ ಸಾರ್ವಜನಿಕರಿಂದ ಅಹವಾಲು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಯು.ಟಿ.ಖಾದರ್.

ಕಳೆದ ಹಲವಾರು ದಿನಗಳಿಂದ ದಕ್ಷಣ ಕನ್ನಡ ಮತ್ತು ಮಲೆನಾಡಿನಾದ್ಯಂತ ವಿಪರೀತ ಮಳೆಯಾಗುತ್ತಿದ್ದು ನೇತ್ರಾವತಿ ನದಿ ಅಪಾಯ ಮೀರಿ ಹರಿಯುತ್ತಿದೆ.

ಇದರಿಂದಾಗಿ ಹರೇಕಳ – ಅಡ್ಯಾರು ದೋಣಿ ಸಂಚಾರ ಸ್ಥಗಿತಗೊಳಿಸಲಾಗಿದ್ದು ಸಾರ್ವಜನಿಕರು ಅಡ್ಯಾರು, ಫರಂಗಿಪೇಟೆ ಹಾಗೂ ಮಂಗಳೂರು ತಲುಪಲು ಸುತ್ತಿ ಬಳಸಿಕೊಂಡು ಹೋಗಾಗಬೇಕಾಗಿದೆ.ಈ ಸಂಬಂಧ ಸಾರ್ವಜನಿಕರು ಕಾಮಗಾರಿ ಪ್ರಗತಿಯಲ್ಲಿರುವ ಹರೇಕಳ ಅಣೆಕಟ್ಟು – ಸೇತುವೆಯಲ್ಲಿ ನಡೆದುಕೊಂಡು ಹೋಗಲು ಶಾಸಕರಲ್ಲಿ ಅಹವಾಲು ಸಲ್ಲಿಸಿದ್ದು ಶಾಸಕ ಯು.ಟಿ.ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುರಕ್ಷತೆಯ ದೃಷ್ಟಿಯಿಂದ ಸೇತುವೆಯಲ್ಲಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದ್ದು, ಈ ಸಂಬಂಧ ಶಾಸಕ ಯು.ಟಿ.ಖಾದರ್ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು, ಸೇತುವೆ ಗುತ್ತಿಗೆದಾರರು, ಕಂದಾಯ ಇಲಾಖೆಯ ಅಧಿಕಾರಿಗಳು, ಪೋಲೀಸ್ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು, ಸದಸ್ಯರು,
ಜನಪ್ರತಿನಿಧಿಗಳೊಂದಿಗೆ ಸ್ಥಳದಲ್ಲಿಯೇ ಚರ್ಚೆ ನಡೆಸಿದರು.

ಇದಕ್ಕೆ ಸಂಬಂಧಿಸಿದಂತೆ  ಪಂಚಾಯತ್ ಕಛೇರಿಯಲ್ಲಿ ಸಭೆ ಕರೆದು ಸಾರ್ವಜನಿಕರ ಸುರಕ್ಷತೆಗೆ ಬೇಕಾದ ಅಗತ್ಯ ಕ್ರಮ ಕೈಗೊಂಡು ನಡೆದುಕೊಂಡು ಹೋಗಲು ಅನುಮತಿ ನೀಡುವಂತೆ ಸೂಚನೆ ನೀಡಿದ್ದಾರೆ.

Sneha Gowda

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

2 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago