News Karnataka Kannada
Thursday, May 09 2024
ಮಂಗಳೂರು

ಕಡಬದಲ್ಲಿ ಕಾಡಾನೆ ಕಾರ್ಯಾಚರಣೆ ಸ್ಥಗಿತ, ಗ್ರಾಮಸ್ಥರ ಆಕ್ರೋಶ

Wild elephant operation stopped in Kadaba, villagers protest
Photo Credit : News Kannada

ಕಡಬ: ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಸಮೀಪ ಫೆ.20ರಂದು ಬೆಳಗ್ಗೆ ಆನೆ ದಾಳಿಯಿಂದ ಇಬ್ಬರು ಮೃತಪಟ್ಟ ಬಳಿಕ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಕಾಡಾನೆ ಸೆರೆ ಹಿಡಿಯಲು ಆರಂಭಿಸಿದ ಆಫರೇಷನ್ ಎಲಿಫೆಂಟ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ ಎನ್ನಲಾಗಿದೆ. ಇದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.

ಇಬ್ಬರನ್ನು ಬಲಿ ಪಡೆದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರಿಂದ ಭಾರಿ ಒತ್ತಡ ಬಂದಿತ್ತು. ಈ ಹಿನ್ನೆಲೆಯಲ್ಲಿ ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ‌ ಕಾಡಾನೆ ಸೆರೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ, ಕಂಜನ್ ಹಾಗೂ ಮಹೇಂದ್ರ ಎಂಬ ಸಾಕಾನೆಗಳು ಕರೆತಂದು ಕಾರ್ಯಾಚರಣೆ ಆರಂಭಿಸಲಾಗಿತ್ತು.

ಮೂರು ದಿನಗಳ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಡ್ರೋನ್ ಬಳಸಿ ಕಾಡಾನೆಯ ಚಲನವಲನಗಳನ್ನು ಪತ್ತೆ ಹಚ್ಚಿ ಫೆ.23ರಂದು ಮಂಡೆಕರ ಬಳಿಯ ಅರಣ್ಯ ಪ್ರದೇಶದಲ್ಲಿ ಒಂದು ಕಾಡಾನೆಯನ್ನು ಸೆರೆ ಹಿಡಿದು ಎರಡು ಸಾಕಾನೆಗಳ ಜತೆ ನಾಗರಹೊಳೆ ಮತ್ತಿಗೋಡು ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿತ್ತು. ಉಳಿದ ಮೂರು ಆನೆಗಳು ನೆಟ್ಟಣದ ಅರಣ್ಯ ಇಲಾಖೆಯ ಆವರಣದಲ್ಲಿ ವಿಶ್ರಾಂತಿ ಪಡೆಯುತ್ತಿತ್ತು. ಆದರೆ ಭಾನುವಾರ (ಫೆ.26 ರಂದು) ರಾತ್ರಿ ನೆಟ್ಟಣದಲ್ಲಿದ್ದ ಮೂರು ಸಾಕಾನೆಗಳನ್ನೂ ಕೊಂಡೊಯ್ಯಲಾಗಿದೆ. ಇದಕ್ಕೆ ಗ್ರಾಮಸ್ಥರು ಅಪಸ್ವರ ಎತ್ತಿದ್ದಾರೆ. ಅರಣ್ಯ ಅಧಿಕಾರಿಗಳು ಅವಘಡ ಸಂಭವಿಸಿದ ಬಳಿಕ ಬಂದು ಒಂದು ಕಾಡಾನೆಯನ್ನು ಹಿಡಿದು ಹೋಗಿದ್ದಾರೆ. ಮುಂದೆ ಕಾಡಾನೆ ಉಪಟಳ ಆರಂಭಿಸಿದರೆ ಏನು ಮಾಡುವುದು ಎನ್ನುವುದು ಇಲ್ಲಿಯ ಗ್ರಾಮಸ್ಥರ ಅಳಲು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು