ಮಂಗಳೂರು

ಮಂಗಳೂರಿನ ಅಭಿವೃದ್ಧಿಗೆ, ಸಾಮರಸ್ಯದ ವಾತಾವರಣಕ್ಕೆ ಕಾಂಗ್ರೆಸ್ ಗೆಲ್ಲಿಸಿ: ಜೆ. ಆರ್. ಲೋಬೊ

ಮಂಗಳೂರು: ಕಾಂಗ್ರೆಸ್ ಪಕ್ಷ ಯಾವಾಗಲೂ ಅಭಿವೃದ್ಧಿಯ ಪರ. ಮಂಗಳೂರನ್ನು ದೂರದೃಷ್ಟಿಯಲ್ಲಿ ಇಟ್ಟುಕೊಂಡು ಸಮಗ್ರವಾಗಿ ಅಭಿವೃದ್ಧಿ ಪಡಿಸುವುದು ಕಾಂಗ್ರೆಸ್ ಗುರಿ ಎಂದು ಮಾಜಿ ಶಾಸಕ ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನುಡಿದರು.

ಅವರು ಇಂದು  ಜೆಪ್ಪು ಮಜಿಲ ಪ್ರದೇಶದಲ್ಲಿ ನಡೆದ ಕಾಂಗ್ರೆಸ್ ಸಮಾಲೋಚನಾ ಸಭೆಯಲ್ಲಿ ಮಾತನಾಡುತ್ತಿದ್ದರು.

2013ರಲ್ಲಿ ಶಾಸಕನಾಗಿದ್ದಾಗ ಮಂಗಳೂರು ಅಭಿವೃದ್ಧಿಗೆ ಅನೇಕ ಯೋಜನೆ ಜಾರಿಗೆ ತಂದಿದ್ದೇನೆ. ಸ್ಮಾರ್ಟ್ ಸಿಟಿ ಯೋಜನೆ, ಅಮೃತ್ ಯೋಜನೆ, ಜಲ ಸಿರಿ ಯೋಜನೆ, ವಸತಿ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಕದ್ರಿ, ಕಂಕನಾಡಿ, ಉರ್ವಾ ಮುಂತಾದ ಕೆಡೆಗಳಲ್ಲಿ ಹೊಸ ಮಾರುಕಟ್ಟೆಗಳನ್ನು ಅನುಷ್ಠಾನ ಮಾಡಿದ್ದೆ ನಾನು. ನೀರಿನ ಬವಣೆ ನೀಗಿಸಲು ಜಲ ಸಿರಿ ಯೋಜನೆ ಅನುಷ್ಠಾನ ನಮ್ಮ ಕಾಲದಲ್ಲಿ ಆಯಿತು. ಆದರೆ ನಂತರದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಪಪ್ರಚಾರದಿಂದ ನಮಗೆ ಸೋಲು ಉಂಟಾಯಿತು. ಆದರೆ ಈಗ ಬಿಜೆಪಿ ಸರಕಾರ ಬಂದ ನಂತರ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಜನ ಸಾಮಾನ್ಯರು ಜೀವನ ಸಾಗಿಸಲು ಕಷ್ಟ ಪಡುತ್ತಿದ್ದಾರೆ. ಆದ್ದರಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ಕಾಂಗ್ರೆಸ್ ನ್ನು ಗೆಲ್ಲಿಸಬೇಕೆಂದು ಕರೆಯಿತ್ತರು.

ಸಭೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ದಕ್ಷಿಣ ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲಿಂ, ಮಾಜಿ ಮೇಯರ್ ಜೇಸಿಂತಾ ಅಲ್ಫ್ರೆಡ್, ಮಾಜಿ ಕಾರ್ಪೊರೇಟರ್ ಅಪ್ಪಿ,ನಾಗೇಂದ್ರ ಕುಮಾರ್ ಪ್ರಮುಖರಾದ ಅಶೋಕ್ ತಾವುರೋ,ಸದಾಶಿವ ಅಮೀನ್, ಟಿ. ಕೆ. ಸುಧೀರ್, ರಮಾನಂದ ಪೂಜಾರಿ, ಅಬ್ದುಲ್ ಹಮೀದ್, ಭಾಸ್ಕರ್ ರಾವ್,ಜಯಂತ್ ಪೂಜಾರಿ, ಕೃತಿನ್ ಕುಮಾರ್, ಕೀರ್ತಿ ರಾಜ್ ಮೊದಲಾದವರು ಉಪಸ್ಥಿತರಿದ್ದರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

7 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

7 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

8 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

8 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

8 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

8 hours ago