Categories: ಮಂಗಳೂರು

ಮೂಲ್ಕಿಯಲ್ಲಿ ಭೀಕರ ಬೈಕ್-ಕಾರು ಅಪಘಾತ: ಯುವತಿ ಸಾವು

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಕಾರು ಡಿಕ್ಕಿಯಾಗಿ ಹೋಂಡಾ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಮೃತಪಟ್ಟಿದ್ದು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೃತರನ್ನು ಕೇರಳ ರಾಜ್ಯದ ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ (21) ಎಂದು ಗುರುತಿಸಲಾಗಿದ್ದು ಗಾಯಾಳು ಬೈಕ್ ಸವಾರನನ್ನು ಬಂಟ್ವಾಳ ತಾಲ್ಲೂಕು ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ಶೆಟ್ಟಿ (21)ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಹೋಂಡಾ ಬೈಕ್ ಗೆ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಕಿನ್ನಿಗೋಳಿ ಕಡೆಯಿಂದ ಮುಲ್ಕಿ ಕಡೆಗೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಹೋಂಡಾ ಕಾರು ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಬೈಕ್ ನ್ನು ಕಾರು ದೂಡಿಕೊಂಡು ಹೋಗಿದ್ದು ಬೈಕ್ ಹಿಂಭಾಗದಲ್ಲಿ ಕುಳಿತುಕೊಂಡಿದ್ದ ಸಹಸವಾರೆ ಪ್ರೀತಿಕಾ ಶೆಟ್ಟಿ ರವರಿಗೆ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿದ್ದಾರೆ.

ಅಪಘಾತದಿಂದ ಕೆಲಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತ ಗೊಂಡಿದ್ದು ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಅಪಘಾತಕ್ಕೀಡಾದ ಎರಡು ವಾಹನಗಳನ್ನು ತೆರವುಗೊಳಿಸಿದ್ದಾರೆ.

ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಎಸಿಪಿ ಗೀತಾ ಕುಲಕರ್ಣಿ, ಇನ್ಸ್ಪೆಕ್ಟರ್ ಶರೀಫ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಅಗಲೀಕರಣಗೊಂಡ ಬಳಿಕ ಬಪ್ಪನಾಡು , ಮುಲ್ಕಿ ಬಸ್ ನಿಲ್ದಾಣ, ವಿಜಯ ಸನ್ನಿಧಿ ಜಂಕ್ಷನ್ ಬಳಿ ಅವೈಜ್ಞಾನಿಕ ಕಾಮಗಾರಿಯಿಂದ ಅನೇಕ ಅಪಘಾತಗಳು ಸಂಭವಿಸಿದ್ದು ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಕೂಡಲೇ ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.

Ashika S

Recent Posts

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

4 mins ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

18 mins ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

25 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

29 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

40 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

44 mins ago