ಬಂಟ್ವಾಳ; ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ದಿನಾಚರಣೆ ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ನೆರವೇರಿಸಿದರು. ಬಳಿಕ ಕಾಂಗ್ರೆಸ್ ಆಶ್ವಾಸನೆಯ ಗ್ಯಾರಂಟಿ ಕಾರ್ಡ್ ವಿತರಣೆ ಹಾಗೂ ಮಹಿಳೆಯರಿಗೆ ಆಯೋಜಿಸಲಾದ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲವೀನಾ ಮೋರಸ್, ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಮಲ್ಲಿಕಾ ವಿ ಶೆಟ್ಟಿ, ಫ್ಲೋಸಿ ಡಿ ಸೋಜ, ಬ್ಲಾಕ್ ಸದಸ್ಯರಾದ ಧನವಂತಿ ಬಂಗೇರ, ಶಬನಾ, ಪಂಚಾಯತ್ ಸದಸ್ಯರಾದ ರಜನಿ ಅಸ್ಮಾ ಮೊದಲಾದವರು ಉಪಸ್ಥಿತರಿದ್ದರು.