News Karnataka Kannada
Wednesday, April 17 2024
Cricket
ಮಂಗಳೂರು

ಎಂಸಿಸಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಮಹಿಳಾ ದಿನಾಚರಣೆ

ಎಂಸಿಸಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಮಾ.9ರಂದು ಬ್ಯಾಂಕಿನ ಮಹಿಳಾ ಸಿಬಂದಿಯ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
Photo Credit : News Kannada

ಮಂಗಳೂರು: ಎಂಸಿಸಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಮಾ.9ರಂದು ಬ್ಯಾಂಕಿನ ಮಹಿಳಾ ಸಿಬಂದಿಯ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ವೈಟ್ ಡೌವ್ಸ್ ಸಂಸ್ಥೆಯ ಸಂಸ್ಥಾಪಕಿ ಕೋರಿನ್ ರಸ್ಕಿನ್ಹಾ ಹಾಜರಿದ್ದರು. ಬ್ಯಾಂಕಿನ ನಿರ್ದೇಶಕಿಯರಾದ ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಪ್ಲಾವಿಯ ಡಿಸೋಜ, ಶರ್ಮಿಳಾ ಮಿನೇಜಸ್, ಬ್ಯಾಂಕಿನ ಶಾಖಾ ಪ್ರಬಂಧಕರಾದ ಬ್ಲಾಂಚ್ ಫೆರ್ನಾಂಡಿಸ್, ಸುನಿತಾ ಡಿಸೊಜ, ಐಡಾ ಪಿಂಟೊ, ಐರಿನ್ ಡಿಸೋಜ, ಜೆಸಿಂತಾ ಫೆರ್ನಾಂಡಿಸ್ ವಿಲ್ಮಾ ಜ್ಯೋತಿ ಸಿಕ್ವೇರಾ ಮತ್ತು ಅನಿತಾ ಡಿಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸ್ವಾಗತಿಸಿ ಮಾತನಾಡಿದ ಬ್ಯಾಂಕಿನ ಜನರಲ್ ಮೆನೆಜರ್ ಸುನಿಲ್ ಮಿನೇಜಸ್‌ರವರು ಬ್ಯಾಂಕಿನ ಮಹಿಳಾ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿ, ಮಹಿಳಾ ದಿನಾಚರಣೆಯ ಪ್ರಾಮುಖ್ಯತೆ ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರ ಮಹತ್ವದ ಕೊಡುಗೆಯ ಬಗ್ಗೆ ವಿವರಿಸಿದರು. ಎಂಸಿಸಿ ಬ್ಯಾಂಕಿನ ಏಳಿಗೆಯಲ್ಲಿ ಮಹಿಳಾ ಸಿಬ್ಬಂದಿಗಳ ಪಾತ್ರವನ್ನು ಅವರು ಕೊಂಡಾಡಿದರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೋರಿನ್ ರಸ್ಕಿನ್ಹಾರವರನ್ನು ಅವರ ಸಾಮಾಜಿಕ ಜವಾಬ್ಧಾರಿ ಮತ್ತು ಅಬಲರಿಗಾಗಿ ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತಾಡಿದ ಅವರು ತಮ್ಮ ಅತಿಥಿ ಭಾಷಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ಎಂಸಿಸಿ ಬ್ಯಾಂಕಿನ ಮಹಿಳಾ ಸಿಬಂದಿಯನ್ನು ಅಭಿನಂದಿಸಿದರು. ಮಹಿಳೆಯರ ಮೇಲೆ ಹೂಡಿಕೆ ಮಾಡುವುದರ ಮೂಲಕ ಬೆಳವಣಿಗೆಯಲ್ಲಿ ವೇಗವನ್ನು ಪಡೆಯಿರಿ ಎಂಬ ಧ್ಯೇಯವನ್ನು ಈ ವರ್ಷದ ಅಂತರರಾಷ್ಟ್ರೀಯ ಮಹಿಳಾ ದಿನ ಹೊಂದಿದ್ದು, ಹೆಣ್ಣು ಮಗುವಿನ ಮೇಲೆ ಹೂಡಿಕೆ ಮಾಡುವುದರಿಂದ ಸಮಾಜದ ಒಳಿತಾಗುವುದು ಎಂದರು. ಮಹಿಳೆಯ ಮಹತ್ವದ ಕೊಡುಗೆಯ ಬಗ್ಗೆ ಜಾಗೃತಿ ಮೂಡಿಸುವುದು, ಸಮಾಜದಲ್ಲಿ ಮಹಿಳೆಯರ ಹಕ್ಕುಗಳು ಮತ್ತು ಗೌರವದ ಮಹತ್ವವನ್ನು ಸಾರುವುದು; ಮಹಿಳಾ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದರು. ತಾಳ್ಮೆ, ಪ್ರಾಮಾಣಿಕತೆ, ಕಠಿಣ ಪರಿಶ್ರಮ, ಬದ್ದತೆ, ನಾಯಕತ್ವ, ನಾವೀನ್ಯತೆ ಮತ್ತು ಸಹಾನುಭೂತಿಗಾಗಿ ಮಹಿಳೆಯರನ್ನು ಗುರುತಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಾರೆ; ಆದುದರಿಂದ, ಮಹಿಳೆಯರು ಸಮಾಜದ ಎಲ್ಲಾ ಪಂಥ್ವಾಹಾನವನ್ನು ಎದುರಿಸಿ ತಮ್ಮ ಆಲೋಚನೆ, ಮಾತು ಮತ್ತು ಕ್ರಿಯೆಯಲ್ಲಿ ಸಕಾರಾತ್ಮಕವಾಗಿರಬೇಕು ಎಂದು ಸಲಹೆ ನೀಡಿದರು. “ವೈಟ್ಸ್ ಡೌವ್ಸ್” ಸಂಸ್ಥೆಯನ್ನು ಕಟ್ಟುವಲ್ಲಿ ತಾವು ಎದುರಿಸಿದ ಪಂಥ್ವಾಹಾನಗಳನ್ನು ವಿವರಿಸಿದ ಅವರು ತಮ್ಮ ಜೀವನವನ್ನು ಉದಾಹರಣೆಯಾಗಿ ಎಲ್ಲರ ಮುಂದಿರಿಸಿದರು.

ಬ್ಯಾಂಕಿನ ಎಲ್ಲಾ ಮಹಿಳೆಯರಿಗೆ ಅಬಿನಂದಿಸಿದ ಬ್ಯಾಂಕಿನ ಉಪಾಧ್ಯಕ್ಷರಾದ ಜೆರಾಲ್ಡ್ ಜೂಡ್ ಡಿಸಿಲ್ವಾ ಕುಟುಂಬದ ಮತ್ತು ಸಮಾಜದ ಶ್ರೇಯೋಭಿವೃದ್ದಿಗೆ ಮಹಿಳೆಯರು ವಹಿಸುವ ಪಾತ್ರದ ಬಗ್ಗೆ ವಿವರಿಸಿದರು. ರಾಷ್ಟ್ರ ಕವಿ, ಜಿ.ಎಸ್. ಶಿವರುದ್ರಪ್ಪರವರ “ಸ್ತ್ರೀ” ಕವಿತೆಯನ್ನು ಉಲ್ಲೇಖಿಸಿದ ಅವರು ಕುಟುಂಬ ಮತ್ತು ಸಮಾಜದ ಹಿತಕ್ಕಾಗಿ ಮಹಿಳೆಯರು ಹಲವಾರು ಸಮಸ್ಯೆಗಳನ್ನು ಎದುರಿಸುವ ಪರಿ ತಮಗೆ ಸೋಜಿಗವಾಗಿದೆ ಎಂದರು.

ಈ ಸಂದರ್ಭದಲ್ಲಿ ನಿರ್ದೇಶಕಿ ಐರಿನ್ ರೆಬೆಲ್ಲೊರವರು ಮಹಿಳಾ ಸಬಲೀಕರಣ ಮತ್ತು ಪ್ರಗತಿಯ ಕುರಿತು ಮಾತನಾಡುತ್ತ, ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಹಲವು ಅಸಮಾನತೆಗಳನ್ನು ಎದುರಿಸಿ, ಸಮಾಜದ ಶಿಲ್ಪಿಯಾಗಿ ಮುನ್ನಡೆಯುವ ಅಗತ್ಯತೆಯನ್ನು ಒತ್ತಿ ಹೇಳಿದರು. ಮಹಿಳೆ ಪ್ರತಿಭೆಗಳನ್ನು ಬಳಸಿ ತನ್ನ ಆರಾಮ ವಲಯದಿಂದ ಹೊರಬಂದು ಮುನ್ನುಗ್ಗುವ ಛಲ ಹೊಂದಿರಬೇಕು ಎಂದು ಕರೆ ನೀಡಿದರು.

ವೇದಿಕೆಯಲ್ಲಿ ಆಸೀನರಾಗಿದ್ದ ಬ್ಯಾಂಕಿನ ನಿರ್ದೇಶಕರು ಮತ್ತು ಶಾಖಾ ಪ್ರಬಂಧಕರನ್ನು ಸನ್ಮಾನಿಸಲಾಯಿತು. ಮಹಿಳಾ ಸಿಬ್ಬಂದಿಯ ಪರವಾಗಿ ಸುರತ್ಕಲ್ ಶಾಖಾ ಪ್ರಬಂಧಕಿಯಾದ ಸುನಿತಾ ಡಿಸೋಜರವರು ಮಾತನಾಡಿ ಮಹಿಳಾ ದಿನಾಚರಣೆಯನ್ನು ಆಚರಿಸಿದ್ದಕ್ಕಾಗಿ ಮಹಿಳಾ ಸಿಬ್ಬಂದಿಯ ಪರವಾಗಿ ಆಡಳಿತ ಮಂಡಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಮಹಿಳಾ ಸಿಬ್ಬಂದಿಯವರಿಗೆ ಬ್ಯಾಂಕಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹೂಗೂಚ್ಛ ನೀಡಿ ಶುಭಾಶಯವನ್ನು ಕೋರಿದರು

ಬ್ಯಾಂಕಿನಲ್ಲಿ ನಿಸ್ವಾರ್ಥ ಮತ್ತು ಸಮರ್ಪಿತ ಸೇವೆ ಸಲ್ಲಿಸಿದ ಕಾರ್ಕಳ ಶಾಖಾ ಪ್ರಬಂಧಕರಾದ ರಾಯನ್ ಪ್ರವೀಣ್ ಇವರನ್ನು ಸನ್ಮಾನಿಸಲಾಯಿತು.

ನಿರ್ದೇಶಕರಾದ ಅಂಡ್ರ್ಯೂ ಡಿಸೋಜ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜ,  ಸಿ.ಜಿ. ಪಿಂಟೊ, ಅನಿಲ್ ಪತ್ರಾವೊ, ಮೆಲ್ವಿನ್ ವಾಸ್,  ವಿನ್ಸೆಂಟ್ ಲಸ್ರಾದೊ,  ಫೆಲಿಕ್ಸ್ ಡಿಕ್ರುಜ್,  ಸುಶಾಂತ್ ಸಲ್ಡಾನ್ಹಾ ಮತ್ತು ಸಿಬ್ಬಂದಿಗಳು ಹಾಜರಿದ್ದರು. ಮನೋಜ್ ಫೆರ್ನಾಂಡಿಸ್ ನಿರೂಪಿಸಿ, ಉಪ ಮಹಾಪ್ರಬಂಧಕ ರಾಜ್ ಎಫ್. ಮಿನೇಜಸ್ ವಂದಿಸಿದರು.

ಸಭಾ ಕರ‍್ಯದ ನಂತರ ಸಿಲ್ವರ್ ಟೋನ್ ಕಾರ್ಕಳ ತಂಡದಿಂದ ಸಂಗೀತ ಕಾರ್ಯಕ್ರಮ, ವಿಸ್ಮಯ ತಂಡದಿಂದ ಹಾಸ್ಯಲಹರಿ ಮತ್ತು ಎಂ.ಸಿ.ಸಿ ಬ್ಯಾಂಕಿನ ಪುರುಷ ಸಿಬ್ಬಂದಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು