Categories: ಮಂಗಳೂರು

ದೇರಳಕಟ್ಟೆ ಫಾದರ್ ಮುಲ್ಲರ್ ಹೋಮಿಯೋಪಥಿ ಮಹಾವಿದ್ಯಾಲಯದಲ್ಲಿ ‘ವಿಶ್ವ ಹೋಮಿಯೋಪಥಿ ದಿನಾಚರಣೆ’

ದೇರಳಕಟ್ಟೆ: ಹೋಮಿಯೋಪಥಿ ಜನಕ ಡಾಕ್ಟರ್ ಸ್ಯಾಮ್ಯುಯೆಲ್ ಹಾನ್ನಿಮನ್ನರ 268ನೇ ಜನ್ಮ ದಿನದ ನೆನಪಿಗಾಗಿ ದೇರಳಕಟ್ಟೆ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಏ.19ರಂದು ವಿಶ್ವ ಹೋಮಿಯೋಪಥಿ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.

ಪರ್ಯಾಯ ವೈದ್ಯಕೀಯ ವ್ಯವಸ್ಥೆ ಮತ್ತು ವೈದ್ಯಕೀಯ ಜಗತ್ತಿಗೆ ಅದರ ಕೊಡುಗೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಪ್ರಮುಖ ಗುರಿಯಾಗಿದೆ.

ಮುಖ್ಯ ಅತಿಥಿಗಳಾದ ಆಯುಷ್ ವಿಭಾಗ ಬೆಂಗಳೂರು ಇದರ ಉಪ ನಿರ್ದೇಶಕರಾದ ಡಾ.ಅಶ್ವತ್ ನಾರಾಯಣ ಕಾರ್ಯಕ್ರಮ  ಉದ್ಘಾಟಿಸಿದರು. ಅತಿಥಿಗಳಾದ 1998ನೇ ಬ್ಯಾಚ್‌ನ ಹಳೆಯ ವಿದ್ಯಾರ್ಥಿ, ನ್ಯಾಶನಲ್ ಹೋಮಿಯೋಪಥಿ ಮೆಡಿಕಲ್‌ ಕಾಲೇಜು ಮತ್ತುಆಸ್ಪತ್ರೆಯ ಅನಾಟಮಿ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್‌ ಡಾ.ಆನಂದ್ ಬಿಹಾರಿ ಸಿಂಗ್, ಕಾರ್ಯಕ್ರಮದ ಅಧ್ಯಕ್ಷ  ಫಾದರ್ ಮುಲ್ಲರ್ ಸೇವಾಸಂಸ್ಥೆಯ ನಿರ್ದೇಶಕ ರಿಚರ್ಡ್ ಅಲೋಶಿಯಸ್ ಕುವೆಲ್ಲೊ, ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತುಆಸ್ಪತ್ರೆಯ ಆಡಳಿತಾಧಿಕಾರಿಗಳಾದ ವಂದನೀಯ ರೋಶನ್‌ ಕ್ರಾಸ್ತಾ, ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಇ.ಎಸ್.ಜೆ.ಪ್ರಭುಕಿರಣ್, ಉಪಪ್ರಾಂಶುಪಾಲ  ಡಾ.ವಿಲ್ಮಾ ಮೀರಾ ಡಿ’ಸೋಜ ಹಾಗೂ ಕಾರ್ಯಕ್ರಮ ಸಂಯೋಜಕರಾದ ಡಾ. ಜೋನ್ ಪೌಲ್‌ರವರು ಉದ್ಘಾಟನಾ ಸಮಾರಂಭದಲ್ಲಿ ಜೊತೆಗೂಡಿದರು.

ಜಿಲ್ಲಾಆಯುಷ್‌ಅಧಿಕಾರಿಡಾ. ಮೊಹಮ್ಮದ್‌ಇಕ್ಬಾಲ್, ಹಾಗೂಡಾ. ಭಾತ್ರಾಸ್ ಹೋಮಿಯೋಪಥಿ, ಮುಂಬಯಿ ವಲಯದ ಮುಖ್ಯಸ್ಥಯಾದಡಾ ಸಮೀರ್‌ಚೌಕರ್ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳು ಪ್ರತಿಷ್ಟಿತ ‘ಡಾ. ಬಾತ್ರಾರವರು ಪ್ರಾಯೋಜಿಸಿದ ಬಾತ್ರಾ ವಿದ್ಯಾರ್ಥಿ ವೇತನ’ವನ್ನುರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ನಡೆಸಿರುವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳ ಮೂಲ ರ‍್ಯಾಂಕ್ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಾದ ಜಿದ್ದು ಸಾಯಿ ಅಖಿಲ, ಅಸ್ವಥಿ ದಿನೇಶ್ ಹಾಗೂಆರ್ದಾ ಗಣೇಶ್ ಜಿ.ರವರಿಗೆ ವಿತರಿಸಿದರು. ತಮ್ಮಅತಿಥಿ ಭಾಷಣದಲ್ಲಿ ವಿಶ್ವ ಹೋಮಿಯೋಪಥಿ ದಿನಾಚರಣಾ ಸಮಾರಂಭದಲ್ಲಿ ತಮ್ಮ ಉಪಸ್ಥಿತಿಯ ಬಗ್ಗೆ ಸಂತೋಷ ವ್ಯಕ್ತಪಡಿಸಿದರು ಹಾಗೂ ವಿದ್ಯಾರ್ಥಿಗಳನ್ನು ಸಂಶೋಧನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿದರು.

ಆಡಳಿತಾಧಿಕಾರಿ  ಫಾದರ್‌ ರೋಶನ್‌ ಕ್ರಾಸ್ತಾ  ಸಮಾಜಕ್ಕೆ ಹೋಮಿಯೋಪಥಿ ಕ್ಷೇತ್ರದ ವೈದ್ಯರು ನೀಡಿರುವಂತಹ ಸೇವೆ  ಹೊಗಳಿ, ಈ ಕ್ಷೇತ್ರದಲ್ಲಿಇನ್ನಷ್ಟು ಸಂಶೋಧನೆಯ ಅಗತ್ಯ ಇರುವುದನ್ನು ಮನವರಿಸಿದರು. ಸಮಾರಂಭದಲ್ಲಿ ಭಾಗವಹಿಸಿದ ಗಣ್ಯ ವ್ಯಕ್ತಿಗಳ ಸಾಧನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ವಿದ್ಯಾರ್ಥಿಗಳು ಅವರ ಅನುಕರಣೆಯನ್ನು ತಮ್ಮ ಜೀವನದಲ್ಲಿಯೂ ಅಳವಡಿಸಿಕೊಳ್ಳುವಂತೆ ಹುರಿದುಂಬಿಸಿದರು.

ರಿಚರ್ಡ್ ಅಲೋಶಿಯಸ್ ಕುವೆಲ್ಲೊ ತಮ್ಮಅಧ್ಯಕ್ಷೀಯ ಭಾಷಣದಲ್ಲಿ ವಿಶ್ವ ಹೋಮಿಯೋಪಥಿ ದಿನಾಚರಣೆಯ ಶುಭಾಶಯ  ತಿಳಿಸಿದರು. ಈ ದಿನವನ್ನುಡಾ.ಸಾಮ್ಯುವೆಲ್ ಹಾನ್ನಿಮನ್ನ್ ಹಾಗೂ ಫಾದರ್‌ ಅಗಸ್ಟಸ್ ಮುಲ್ಲರ್‌ನಂತಹ ಶ್ರೇಷ್ಟ ವ್ಯಕ್ತಿಗಳಿಗೆ ಗೌರವ ಸಲ್ಲಿಸಲು ಹಾಗೂ ಅವರಿಂದ ಪ್ರೇರೇಪಣೆಗೊಳ್ಳಲು ಆಚರಿಸಲಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಗೌರವ ಅತಿಥಿ ತಮ್ಮ ಕ್ಲಿನಿಕಲ್‌ ಅನುಭವನ್ನು ನೆರೆದಿರುವವರೊಂದಿಗೆ ಹಂಚಿಕೊಂಡು ವಿದ್ಯಾರ್ಥಿಗಳನ್ನು ಹೋಮಿಯೋಪಥಿ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡುವಂತೆ ಪ್ರೇರೇಪಿಸಿದರು.

ಕಾರ್ಯಕ್ರಮದ ಸಂಯೋಜಕ ಡಾ.  ಜೋನ್ ಪೌಲ್‌ವಂದಿಸಿದರು. ವಿಶ್ವ ಹೋಮಿಯೋಪಥಿ ದಿನಾಚರಣೆಯ ಪ್ರಯುಕ್ತ ಏ.18, 19ರಂದು ವಿವಿಧ ಸಾಹಿತ್ಯ ಸ್ಪರ್ದೆ ಹಾಗೂ ಸಾಂಸ್ಕçತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ವಿಜೇತರಿಗೆ ಬಹುಮಾನ  ನೀಡಿ ಸನ್ಮಾನಿಸಲಾಯಿತು.

ಡಾ. ರೆನಿಟಾ ಡಿ’ಸೋಜ ಹಾಗೂಡಾ. ವಿಗ್ನೇಶ್ ನಾಯಕ್‌ ಕಾರ್ಯಕ್ರಮವನ್ನು ನಿರೂಪಿಸಿದರು.

Gayathri SG

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

2 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

2 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

3 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

3 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

3 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

4 hours ago