ಮಂಗಳೂರು: ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ, ವಿಶ್ವ ಕೊಂಕಣಿ ಕೇಂದ್ರ ಮಂಗಳೂರು ಇದರ ವತಿಯಿಂದ ಬಸ್ತಿ ವಾನ್ ಶೆಣೈ ಅವರ ಪ್ರತಿಮೆ ಅನಾವರಣ ಮತ್ತು ನೂತನ ಸಭಾಂಗಣದ ಲೋಕಾರ್ಪಣಾ ಕಾರ್ಯಕ್ರಮ ಮಂಗಳೂರಿನ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ನೆರವೇರಿತು.
ಕಾರ್ಯಕ್ರಮಕ್ಕೆ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ್ ಕಾಮತ್, ಉದ್ಯಮಿಗಳಾದ ಉಲ್ಲಾಸ್ ಕಾಮತ್, ಮೈಕಲ್ ಡಿಸೋಜ, ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ಅಧ್ಯಕ್ಷ ಡಾ. ಪಿ ದಯಾನಂದ ಪೈ, ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ್ ಶೆಣೈ, ವಿಶ್ವ ಕೊಂಕಣಿ ವಿದ್ಯಾರ್ಥಿ ವೇತನ ಕಾರ್ಯದರ್ಶಿ ಪ್ರದೀಪ್ ಜಿ ಪೈ ಮತ್ತಿತರರು ಉಪಸ್ಥಿತರಿದ್ದರು.