Categories: ಮಂಗಳೂರು

ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಯೋಗದಿನಾಚರಣೆ

ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಯೋಗದಿನಾಚರಣೆಯ ಪ್ರಯುಕ್ತ ವಿದ್ಯಾಸಂಸ್ಥೆಯ 1200 ಮಂದಿ ವಿದ್ಯಾರ್ಥಿಗಳು  ಸಾಮೂಹಿಕ ಯೋಗ ಪ್ರದರ್ಶಿಸುವ ಮೂಲಕ ಗಮನ ಸೆಳೆದರು.

ಶಾಲೆಯ ವಿಶಾಲವಾದ ಕಲಿಕಾ ಸಭಾಭವನದಲ್ಲಿ ಯೋಗ ಪ್ರದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಯೋಗಾಸನದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು.

ಶಾಲಾ ದತ್ತು ಸಂಸ್ಥೆ ಶ್ರೀದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ನಿತ್ಯ ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಪಡೆಯಲು ಸಾದ್ಯವಿದೆ.

ಯೋಗದಿಂದ ಕಾಯಿಲೆಗಳು ದೂರವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಒಳಿತಿಗಾಗಿ ಯೋಗಭ್ಯಾಸ ಮಾಡಬೇಕು ಎಂದು ತಿಳಿಸಿದರು.

ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ರಮಾನಂದ್ ಅವರು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ಪ್ರೌಢಶಾಲಾ ವಿಭಾಗದ ಎಸ್‌ಡಿಎಂಸಿ ಕಾರ್ಯಧ್ಯಕ್ಷ ಪುರುಷೋತ್ತಮ ಅಂಚನ್, ಟ್ರಸ್ಟಿ ರಾಮಚಂದ್ರ ಪೂಜಾರಿ ಕರೆಂಕಿ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕ ಮೌರೀಸ್ ಡಿಸೋಜಾ ಉಪಸ್ಥಿತರಿದ್ದರು.

ಸಹಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್ ಕಾರ್ಯಕ್ರಮ ನಿರೂಪಿಸಿದರು. ದಡ್ಡಲಕಾಡು ಶಾಲೆಯಲ್ಲಿ ಪ್ರತಿದಿನ ಬೆಳಿಗ್ಗೆ ಎಲ್ಲಾ ವಿದ್ಯಾರ್ಥಿಗಳಿಗೆ ಕಡ್ಡಾಯ ಯೋಗಾಸನ ತರಬೇತಿಯನ್ನು ನೀಡಲಾಗುತ್ತಿದೆ.

Sneha Gowda

Recent Posts

ನಿವೃತ್ತಿ ಬಗ್ಗೆ ವಿರಾಟ್ ಕೊಹ್ಲಿ ಬಿಚ್ಚುಮಾತು: ಫ್ಯಾನ್ಸ್​ ಶಾಕ್!

ಉತ್ತಮ ನಿರೀಕ್ಷೆಯೊಂದಿಗೆ ಐಪಿಎಲ್-2024 ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು (ಆರ್‌ಸಿಬಿ) ತನ್ನ ಮೊದಲ ಪಂದ್ಯದಲ್ಲೇ ಸೋಲಿನಿಂದ ಲೀಗ್ ಪ್ರಾರಂಭಿಸಿತು.…

6 mins ago

ಬಾತ್​ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ !

ನಗರದಲ್ಲಿ​ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.

33 mins ago

ಅಂಜಲಿ‌ ಕೊಲೆ‌ ಕೇಸ್‌ ನಲ್ಲಿ ಕರ್ತವ್ಯ ಲೋಪ : ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

ಅಂಜಲಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಬೆಂಡಿಗೇರಿ ಪೊಲೀಸ್‌ ಇನ್ಸ್‌ಪೆಕ್ಟರ್ ಸೇರಿ ಓರ್ವ ಸಿಬ್ಬಂದಿಯನ್ನು ಪೊಲೀಸ್ ಕಮೀಷನ‌ರ್ ಅಮಾನತು ಮಾಡಿ ಆದೇಶ…

43 mins ago

ಮಹತ್ವದ ತೀರ್ಪಿನಲ್ಲಿ ಇಡಿ ಕಾರ್ಯಗಳಿಗೆ ಕಡಿವಾಣ ಹೇರಿದ ಸುಪ್ರೀಂ ಕೋರ್ಟ್‌ !

ಅತ್ಯಂತ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, ಜಾರಿ ನಿರ್ದೇಶನಾಲಯದ ಕಾರ್ಯಗಳಿಗೆ ಕಡಿವಾಣ ಹೇರಿದೆ. ಯಾವುದೇ ವ್ಯಕ್ತಿ ವಿರುದ್ಧ ದಾಖಲಾದ ಅಕ್ರಮ…

43 mins ago

ಅಪರೇಷನ್‌ ವೇಳೆ ವೈದ್ಯೆಯ ಎಡವಟ್ಟು : ಹೊಟ್ಟೆಯಲ್ಲಿತ್ತು 3 ಅಡಿ ಉದ್ದದ ಬಟ್ಟೆ

ಹೆರಿಗೆ ನಂತರ ಅಪರೇಷನ್‌ ವೇಳೆ ವೈದ್ಯರ ಎಡವಟ್ಟಿನಿಂದ 3 ಅಡಿ ಉದ್ದದ ಬಟ್ಟೆಯನ್ನು ಹೊಟ್ಟೆಯಲ್ಲೇ ಬಿಟ್ಟು ಶಸ್ತ್ರಚಿಕಿತ್ಸೆ ಮಾಡಿರುವ ಘಟನೆ…

54 mins ago

ಫೆಡರೇಷನ್ ಕಪ್: ನೀರಜ್‌ಗೆ ಚಿನ್ನ, ರಾಜ್ಯದ ಮನುಗೆ ಬೆಳ್ಳಿ ಗರಿ

ಒಲಿಂಪಿಕ್ಸ್‌, ವಿಶ್ವ ಚಾಂಪಿಯನ್‌ ನೀರಜ್‌ ಚೋಪ್ರಾ ಫೆಡರೇಶನ್‌ ಕಪ್ ಅಥ್ಲೆಟಿಕ್ಸ್‌ ಕೂಟದ ಜಾವೆಲಿನ್‌ ಎಸೆತದಲ್ಲಿ ನಿರೀಕ್ಷೆಯಂತೆಯೇ ಚಿನ್ನದ ಪದಕ ಗೆದ್ದಿದ್ದಾರೆ.…

1 hour ago