Categories: ಮಂಗಳೂರು

ಭಾರತದ ರಂಗಭೂಮಿಯಲ್ಲಿ ಯಕ್ಷಗಾನ ಹೆಮ್ಮೆಯ ಕಲೆ: ಪ್ರಭಾಕರ ಜೋಷಿ

ಮಂಗಳೂರು: ಭಾರತದ ರಂಗಭೂಮಿಯಲ್ಲಿ ಯಕ್ಷಗಾನ ಒಂದು ಹೆಮ್ಮೆಯ ಕಲೆ. ಯಕ್ಷಗಾನ ಸಂಶೋಧನೆ ದೃಷ್ಟಿಯಿಂದ ನೋಡಿದಾಗಲೂ ಯಕ್ಷಗಾನ ವಿಶ್ವಪ್ರಸಿದ್ದಿ  ಪಡೆದ ಕಲೆಯಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷಗಾನಕ್ಕೆ ಹೊಸ ಭಾಷ್ಯೆಯನ್ನು ಬರೆದಿದೆ ಎಂದು ಹಿರಿಯ ಯಕ್ಷಗಾನ ವಿದ್ವಾಂಸ ಪ್ರಭಾಕರ ಜೋಷಿ ತಿಳಿಸಿದರು.

ಅಡ್ಯಾರ್ ಗಾರ್ಡನ್ ನಲ್ಲಿ ಜರಗಿದ ಯಕ್ಷಧ್ರುವ ಪಟ್ಲ ಸಂಭ್ರಮ 2023 ರ ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆ  ಉದ್ಘಾಟಿಸಿ ಅವರು ಮಾತನಾಡಿದರು.

ಪಟ್ಲ ಭಾಗವತರ ಜನಪ್ರಿಯತೆ ಮತ್ತು ಜವಾಬ್ದಾರಿ ಏನು ಎಂಬುದನ್ನು ಪಟ್ಲ ಫೌಂಡೇಶನ್ ಟ್ರಸ್ಟ್ ನ ಮೂಲಕ ತಿಳಿಯ ಬಹುದು ಎಂದರು.
ಪ್ರಸ್ತಾವಿಕವಾಗಿ ಮಾತನಾಡಿದ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ  ಯಕ್ಷಗಾನದ ಪಾರಂಪರಿಕೆ, ಸೊಗಡನ್ನು ಉಳಿಸುವ ಪ್ರಯತ್ನವೇ ಯಕ್ಷಗಾನ ಸ್ಪರ್ಧೆಯ ಉದ್ದೇಶವಾಗಿದೆ ಎಂದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕಲ್ಕೂರ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮಹೇಶ್ ಮೋಟರ್ಸ್ ಸಂಸ್ಥೆಯ ಮಾಲಕ ಜಯರಾಮ ಶೇಖ, ಬಹರೈನ್ – ಸೌದಿ ಘಟಕದ ಅಧ್ಯಕ್ಷ ವಿ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು.
ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಕುಂಬಳೆ ಸುಂದರ ರಾವ್ ವೇದಿಕೆಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳ ಯಕ್ಷಗಾನ ಬಯಲಾಟ ಸ್ಪರ್ಧೆ ನಡೆಯಿತು. ಡಾ ಪುತ್ತೂರು ಶ್ರೀಧರ ಭಂಡಾರಿ ವೇದಿಕೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಯಕ್ಷಗಾನ ಬಯಲಾಟ ಸ್ಪರ್ಧೆ ನಡೆಯಿತು. ಇದೇ ಸಂದರ್ಭದಲ್ಲಿ ಅಪಘಾತ ವಿಮಾ ಯೋಜನೆಯಲ್ಲಿ ಕಲಾವಿದರು ಹೆಸರು ನೋಂದಾಯಿಸಿಕೊಂಡರು.

ಹೈಸ್ಕೂಲ್ ವಿಭಾಗದ ಸ್ಪರ್ಧೆ ತೀರ್ಪುಗಾರರಾಗಿ ಕೆಳಕಂಡವರು ಪಾಲ್ಗೊಂಡರು.
* ವಾಟೆಪಡ್ಪು ವಿಷ್ಣು ಶರ್ಮ
* ದಿವಿತ್ ಕೋಟ್ಯಾನ್
* ಆರತಿ ಪಟ್ರಮೆ

ಕಾಲೇಜು ವಿಭಾಗ ಸ್ಪರ್ಧಾಕೂಟದಲ್ಲಿ ಕೆಳಕಂಡವರು ತೀರ್ಪುಗಾರರಾಗಿ ಪಾಲಗೊಂಡರು

*ಕೃಷ್ಣ ಪ್ರಕಾಶ ಉಳಿತ್ತಾಯ
*ಉಬರಡ್ಕ ಉಮೇಶ್ ಶೆಟ್ಟಿ
*ಸಂಜಯ್ ಕುಮಾರ್ ಗೋಣಿಬೀಡು

Gayathri SG

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

1 min ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

10 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

13 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

25 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

27 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

28 mins ago