News Karnataka Kannada
Sunday, April 28 2024
ಮಂಗಳೂರು

ಅಪಘಾತದಲ್ಲಿ ಯುವಕ ಸಾವು: ಪೋಸ್ಟ್‌ ಮಾರ್ಟ್ಂ ವರದಿಯಿಂದ ಹೊರಬಿತ್ತು ಸತ್ಯಸಂಗತಿ

Youth dies in accident, post-mortem report emerges
Photo Credit : News Kannada

ಕಡಬ: ಚಿನ್ನದ ಅಂಗಡಿಯ ಉದ್ಘಾಟನೆಯ ದಿನದಂದೇ ಮಾಲೀಕ ದಾರುಣವಾಗಿ ಸಾವನ್ನಪ್ಪಿದ ಘಟನೆ ವರದಿಯಾಗಿತ್ತು. ಬೆಳ್ತಂಗಡಿಗೆಂದು ಹೋದವರು ಗುಂಡ್ಯ ಸಮೀಪಿಸುತ್ತಿದ್ದಂತೆ ಕೆಂಪು ಹೊಳೆಯಲ್ಲಿ ಬೈಕ್ ಅಪಘಾತಕ್ಕೀಡಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಇದು ಸಾವು ಹಲವು ಅನುಮಾನಗಳಿಗೂ ಎಡೆ ಮಾಡಿ ಕೊಟ್ಟಿತ್ತು. ಇದೀಗ ಮೃತಪಟ್ಟ ನಾಗಪ್ರಸಾದ್ ರವರ ಪೋಸ್ಟ್ ಮಾರ್ಟಂ ವರದಿ ಬಂದಿದ್ದು ಸಹಜ ರಸ್ತೆ ಅಪಘಾತಕ್ಕೆ ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಕಡಬ ತಾಲೂಕಿನ ಮರ್ದಾಳದ ಮಸೀದಿ ಬಿಲ್ಡಿಂಗ್ ನಲ್ಲಿ ಕಡಬ ನಿವಾಸಿಯಾಗಿರುವ ದಯಾನಂದ ಆಚಾರ್ಯ ಪುತ್ರ ನಾಗಪ್ರಸಾದ್ ಮಾಲೀಕತ್ವದ ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದ ಅಂಗಡಿ ಜೂ.22 ರಂದು ಉದ್ಘಾಟನೆಯಾಗಬೇಕಿತ್ತು ಮುಂಜಾನೆ ನಾಗಪ್ರಸಾದ್ ಸಕಲೇಶಪುರ ಠಾಣಾ ವ್ಯಾಪ್ತಿಯ ಗುಂಡ್ಯ ಕೆಂಪುಹೊಳೆ ಸಮೀಪ ಶವವಾಗಿ ಪತ್ತೆಯಾಗಿದ್ದರು.

ಘಟನೆ ಬಗ್ಗೆ ಸಾರ್ವಜನಿಕವಾಗಿ ಹಲವು ಅನುಮಾನಗಳಿದ್ದ ಕಾರಣ ಪೊಲೀಸರು ಪೋಸ್ಟ್ ಮಾರ್ಟಮ್ ವರದಿಗಾಗಿ ಕಾಯುತ್ತಿದ್ದರು. ಇದೀಗ ಪೋಸ್ಟ್ ಮಾರ್ಟಮ್ ವರದಿ ಬಂದಿದ್ದು, ನಾಗಪ್ರಸಾದ್ ಅಪಘಾತದಿಂದಲೇ ಸಾವನ್ನಪ್ಪಿದ್ದಾರೆ ಎಂದು ದೃಢಪಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು