News Karnataka Kannada
Friday, May 10 2024
ಮಂಗಳೂರು

ಬಿಜೆಪಿ ಶಾಸಕರ ಅಮಾನತು ವಿರೋಧಿಸಿ ಯುವಮೋರ್ಚಾ ಪ್ರತಿಭಟನೆ

Yuva Morcha protests against suspension of BJP MLAs
Photo Credit : News Kannada

ಮಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದರು ಎಂದು 10 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕಾಂಗ್ರೆಸ್ ಪಕ್ಷದ ನಡವಳಿಕೆ ಹಾಗೂ ನಿಷ್ಪಕ್ಷಪಾತವಾಗಿ ನ್ಯಾಯ ನೀಡಬೇಕಾಗಿದ್ದ ಸ್ಪೀಕರ್ ವರ್ತನೆ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ಸುರತ್ಕಲ್ ನಲ್ಲಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯಲ್ಲಿ ಮಂಗಳೂರು ಉತ್ತರಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ, ಶ್ವೇತಾ ಪೂಜಾರಿ ಮತ್ತಿತರರು ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷ ನಡೆದುಕೊಂಡ ರೀತಿಯನ್ನು ಖಂಡಿಸಿದರು. ಬಿಜೆಪಿಯ ಮುಖಂಡರು ಯುವ ಮೋರ್ಚಾ ಉತ್ತರಮಂಡಲದ ಪದಾಧಿಕಾರಿಗಳು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರು ಕಾರ್ಯಕರ್ತರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು