Categories: ಮಂಗಳೂರು

ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಆಂಕೊಲಾಜಿ- ಕ್ಯಾನ್ಸರ್ ಮುಕ್ತ ಸಮಾಜಕ್ಕಾಗಿ ಸಂಗೀತ ಕಾರ್ಯಕ್ರಮ

ಮಂಗಳೂರು: ಜುಲೇಖಾ ಯೆನೆಪೊಯ ಆಂಕೊಲಾಜಿ ಸಂಸ್ಥೆ, ಯೆನೆಪೊಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ) ದ ಘಟಕ , ಕ್ಯಾನ್ಸರ್ ಮುಕ್ತ ಸಮಾಜಕ್ಕಾಗಿ ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಡಾ.ಅಂಬೇಡ್ಕರ್ ಭವನದಲ್ಲಿ ಸಂಗೀತ ಕಾರ್ಯಕ್ರಮನ್ನು ನಡೆಸಿತು. ಕ್ಯಾನ್ಸರ್ ರೋಗಿಗಳಿಗೆ ಭರವಸೆಯ ಕಿರಣವಾಗಿ ಈ ಸಂಗೀತ ಸಂಜೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಮಾರಂಭದ ಅಧ್ಯಕ್ಷತೆಯನ್ನು ಡಾ.ಯೆನೆಪೊಯ ಅಬ್ದುಲ್ಲ ಕುಂಞಿ ವಹಿಸಿದ್ದರು- ಕುಲಪತಿ, ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ) ಮುಖ್ಯ ಅತಿಥಿಗಳಾಗಿ ಸಿಪಿಸಿ ಕರ್ನಾಟಕದ ಆದಾಯ ತೆರಿಗೆ ಆಯುಕ್ತರಾದ ಶ್ರೀಮತಿ ಎಚ್ ಎಲ್ ಸೌಮ್ಯಾ ಆಚಾರ್ ಐಆರ್ ಎಸ್ ಮತ್ತು ಕಿದ್ವಾಯಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಆಂಕೊಲಾಜಿಯ ನಿರ್ದೇಶಕ ಡಾ.ವಿ ಲೋಕೇಶ್ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಶ್ರೀ ಆರ್ ಗೋಪಿನಾಥ್ ರಾವ್, ಉಪ ನಿರ್ದೇಶಕರು, ಭಾರತ ಸರ್ಕಾರ, ಡಾ. ಶೇಖರ್ ಪಾಟೀಲ್, ಆಂಕೊಲಾಜಿಸ್ಟ್, ಎಚ್ಸಿಜಿ ಆಸ್ಪತ್ರೆ ಮತ್ತು ಶ್ರೀ. ಟಿ ಆರ್ ಗೋಪಾಲಕೃಷ್ಣನ್, ಮಾಜಿ ಸಂಪಾದಕ-ಮುಖ್ಯಸ್ಥ, ದಿ ವೀಕ್ ಮ್ಯಾಗಜೀನ್. ರವರು ವಿಶೇಷ ಆಹ್ವಾನಿತರಾಗಿದ್ದರು.

ಡಾ.ಎಂ.ವಿಜಯಕುಮಾರ್, ಉಪಕುಲಪತಿ- ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ). ವಿವಿಧ ಕ್ಯಾನ್ಸರ್ ಅಂಶಗಳ ಕುರಿತು ಸಂಕ್ಷಿಪ್ತ ಭಾಷಣ ಮಾಡಿದರು, ಇದೇ ನಿಟ್ಟಿನಲ್ಲಿ ಜುಲೇಖಾ ಯೆನೆಪೋಯ ಆಂಕೊಲಾಜಿ ಸಂಸ್ಥೆಯು ಸಲ್ಲಿಸಿದ ಸೇವೆಗಳನ್ನು ಒತ್ತಿ ಹೇಳಿದರು.

ಯೆನೆಪೊಯ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಜುಲೇಖಾ ಯೆನೆಪೊಯ ಆಂಕೊಲಾಜಿ ಸಂಸ್ಥೆಗೆ ಸಂಬಂಧಿಸಿದಂತೆ ಮಾಹಿತಿ ನೀಡುವ ಪ್ರಸ್ತುತಿಯನ್ನು ಡಾ.ನಾಗರಾಜ್ ಶೇಟ್ , ಮಾರ್ಕೆಟಿಂಗ್ ಮ್ಯಾನೇಜರ್-ಮತ್ತು ಸಹಾಯಕ ವೈದ್ಯಕೀಯ ಅಧೀಕ್ಷಕರು ಇವರು ವಿವರಿಸಿದರು.

ಕಾರ್ಯಕ್ರಮದಲ್ಲಿ ಡಾ.ಕೆ.ಎಸ್.ಗಂಗಾಧರ ಸೋಮಯಾಜಿ, ರಿಜಿಸ್ಟ್ರಾರ್ ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ). ಡಾ.ಜಲಾಲುದ್ದೀನ್ ಅಕ್ಬರ್, ಪ್ರೊಫೆಸರ್ ಮತ್ತು ಎಚ್ಒಡಿ, ಸರ್ಜಿಕಲ್ ಆಂಕೊಲಾಜಿ, ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ) ಮತ್ತು ನೌಕರರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವು ವಿವಿಧ ಸಾಂಸ್ಕೃತಿಕ ಮತ್ತು ಇತರ ಪ್ರದರ್ಶನಗಳಿಗೆ ಸಾಕ್ಷಿಯಾಯಿತು. ಶ್ರೀ ನಾಗರಾಜ ಕೋಟೆ ಅವರಿಂದ ಸ್ಟ್ಯಾಂಡಪ್ ಕಾಮಿಡಿ, ಡಾ.ಸಜೀವ್ ನಾಯರ್ ಅವರಿಂದ ಪ್ರೇರಕ ಭಾಷಣ, ಸಂಗೀತ ಕಛೇರಿ, ಏಕವ್ಯಕ್ತಿ ನೃತ್ಯ ಮತ್ತು ಶಾಸ್ತ್ರೀಯ ನೃತ್ಯ ಕಾರ್ಯಕ್ರಮಗಳು, ಕಾರ್ಯಕ್ರಮಕ್ಕೆ ಮೆರುಗು ನೀಡಿತು.

ವಿಶ್ವವಿದ್ಯಾನಿಲಯದ ಜೊತೆಗೆ, ಈ ಕಾರ್ಯಕ್ರಮವನ್ನು ಜಂಟಿಯಾಗಿ ಶ್ರೀ. ಎಂ ಕೆ ಸೋಮಶೇಖರನ್, ಜೀವ ಜ್ಯೋತಿ ಎಜುಕೇಷನಲ್ ಟ್ರಸ್ಟ್ ಮತ್ತು ಸತ್ಯನಾರಾಯಣ, ಮಾಧ್ಯಮ ಸಲಹೆಗಾರ – ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ) ಇವರು ಏರ್ಪಡಿಸಿದ್ದರು.

Sneha Gowda

Recent Posts

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

6 mins ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

10 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

34 mins ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

42 mins ago

ವಿದ್ಯಾರ್ಥಿನಿಯ ಹತ್ಯೆ ಪ್ರಕರಣ: ಮರದ ಮೇಲೆ ಬಾಲಕಿಯ ರುಂಡ ಪತ್ತೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ

48 mins ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

1 hour ago